ಹಲ್ಲೆಗೈದು ಪರಾರಿಗೆ ಯತ್ನಿಸಿದ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ

ಕಲಬುರ್ಗಿ: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ರೌಡಿ ಶೀಟರ್ ಪ್ರದೀಪ್ ಅಲಿಯಾಸ್ ಸೆವೆನ್ ಸ್ಟಾರ್ ಪ್ರದೀಪ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಈಚೆಗೆ ಈತ ಆರ್.ಜಿ.ನಗರ ಠಾಣೆ ಪಿಎಸ್ಐ ಮತ್ತು ಕಾನ್ಸ್ಟೆಬಲ್ಗಳ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ. ಖಚಿತ ಮಾಹಿತಿ ಆಧರಿಸಿ ಬಂಧಿಸಲು ತೆರಳಿದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಆತ್ಮ ರಕ್ಷಣೆಗಾಗಿ ಅಶೋಕ ನಗರ ಠಾಣೆ ಪಿಎಸ್ಐ ರಮೇಶ್ ಅವರು ಪ್ರದೀಪ್ನ ಎರಡೂ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗಾಯಾಳು ಪ್ರದೀಪ್ನನ್ನು ಜಿಲ್ಲಾಸ್ಪತ್ರೆಗೆ ಹಾಗೂ ಕಾನ್ಸ್ಟೆಬಲ್ಗಳಾದ ತೌಸಿಫ್, ವೆಂಕಟೇಶ್, ಬಸವರಾಜು ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಹರಣ, ದೊಂಬಿ, ಗಲಭೆ, ಕೊಲೆ ಯತ್ನ ಸೇರಿದಂತೆ ಪ್ರದೀಪ್ ಮೇಲೆ 23 ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.