ಪ್ರಥಮ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ

7

ಪ್ರಥಮ ಪಿಯು ಪರೀಕ್ಷೆ ಮುಂದೂಡಿಕೆ ಸಾಧ್ಯತೆ

Published:
Updated:

ಬೆಂಗಳೂರು: ಜನವರಿ 31ರಿಂದ ನಡೆಯಬೇಕಾಗಿರುವ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ದಿನಾಂಕ ನಿಗದಿಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಂದ ಆಕ್ಷೇಪ ವ್ಯಕ್ತವಾಗಿರುವುದರಿಂದ, ಕೆಲವು ದಿನಗಳ ಕಾಲ ಮುಂದೂಡುವ ಸಾಧ್ಯತೆ ಇದೆ.

ಅವಧಿಗೆ ಮೊದಲೇ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಸಾಕಷ್ಟು ಕಾಲೇಜುಗಳಲ್ಲಿ ಪಾಠ– ಪ್ರವಚನ ಪೂರ್ಣಗೊಳಿಸಿಲ್ಲ. ಅಲ್ಲದೆ, ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಸಪ್ಲಿಮೆಂಟರಿ ಪರೀಕ್ಷೆ ಬರೆದು ಆಗಸ್ಟ್‌ನಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಸೇರಿದ್ದರು. ಈ ವಿದ್ಯಾರ್ಥಿಗಳು ಕೇವಲ ಐದರಿಂದ ಆರು ತಿಂಗಳಲ್ಲಿ ಅಂತಿಮ ಪರೀಕ್ಷೆ ಎದುರಿಸುವಂತಾಗಿದೆ ಎಂಬ ಆಕ್ಷೇಪ ಕೇಳಿಬಂದಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಪಿಯು ಮಂಡಳಿ ಅಧಿಕಾರಿಯೊಬ್ಬರು, ಏಪ್ರಿಲ್‌– ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುವುದರಿಂದ ಎಲ್ಲ ಪರೀಕ್ಷೆಗಳನ್ನು ಬೇಗ ನಡೆಸಲಾಗುತ್ತಿದೆ. ಪ್ರಥಮ ಪಿಯುಸಿ ಪರೀಕ್ಷೆ ದಿನಾಂಕವನ್ನು ಅವಧಿಗಿಂತ ಮೊದಲೇ ನಿಗದಿ ಮಾಡಿರುವುದು ನಿಜ. ಈ ಬಗ್ಗೆ ಆಕ್ಷೇಪಗಳೂ ಬಂದಿವೆ. ಹೊಸ ನಿರ್ದೇಶಕರು ಬರಲಿದ್ದು, ಪರೀಕ್ಷೆ ಮುಂದೂಡುವ ಸಂಬಂಧ ಅವರು ನಿರ್ಧಾರ ತೆಗೆದುಕೊಳ್ಳಬಹುದು ಎಂದರು.

ಪ್ರಥಮ ಪಿಯು ವಿಜ್ಞಾನದ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗೂ 10 ದಿನಗಳು ಮುಂಚಿತವಾಗಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗಾಗಿ ಅಧ್ಯಯನ ನಡೆಸಲು ಸಾಧ್ಯ ಆಗುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.

ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ಜನವರಿ 3ರಿಂದ 12ರವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲೇ ಜೆಇಇ ಪರೀಕ್ಷೆ ನಡೆಯುವುದರಿಂದ ವಿಜ್ಞಾನದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಪೂರ್ವಸಿದ್ಧತಾ ಪರೀಕ್ಷೆಗೆ ಹಾಜರಾಗದೇ ಇರಲು ನಿರ್ಧರಿಸಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !