ದಡಕ್ಕೆ ಮರಳಲು ಮೀನುಗಾರರಿಗೆ ಸೂಚನೆ

7

ದಡಕ್ಕೆ ಮರಳಲು ಮೀನುಗಾರರಿಗೆ ಸೂಚನೆ

Published:
Updated:

ಕಾರವಾರ: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಅ.6ರ ವೇಳೆಗೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಇದರಿಂದ ರಾಜ್ಯದ ಕರಾವಳಿಯೂ ಸೇರಿದಂತೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ರಾಷ್ಟ್ರೀಯ ಸಾಗರ ಮಾಹಿತಿ ಕೇಂದ್ರ ಎಚ್ಚರಿಕೆ ನೀಡಿವೆ. ಈ ಸಂದರ್ಭದಲ್ಲಿ ಭಾರಿ ಗಾತ್ರದ ಅಲೆಗಳು ಏಳಬಹುದು ಮತ್ತು ಮಳೆಯಾಗಬಹುದು.

ಹೀಗಾಗಿ ಆಳಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದವರು ಕೂಡಲೇ ದಡಕ್ಕೆ ವಾಪಸಾಗಬೇಕು. ಮುಂದಿನ ಸೂಚನೆ ಬರುವವರೆಗೂ ಪುನಃ ಸಮುದ್ರಕ್ಕೆ ಹೋಗಬಾರದು. ಪ್ರಾಕೃತಿಕ ಸವಾಲುಗಳನ್ನು ಎದುರಿಸಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಬುಧವಾರ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮೀನುಗಾರರಿಗೆ ಸೂಕ್ತ ಮಾಹಿತಿ ನೀಡುವಂತೆ ಬಂದರು ಇಲಾಖೆ ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಿಗೆ ಅವರು ಪತ್ರ ಬರೆದಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !