ಮಂಗಳವಾರ, ಸೆಪ್ಟೆಂಬರ್ 22, 2020
20 °C

ಪ್ರವಾಹ ಯಥಾಸ್ಥಿತಿ: ಸಂಚಾರಕ್ಕೆ ಮುಕ್ತವಾಗದ ಹೆದ್ದಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ಜಿಲ್ಲೆಯ ನರಗುಂದ ಮತ್ತು ರೋಣ ತಾಲ್ಲೂಕಿನಲ್ಲಿ ಸೋಮವಾರ ಮಲಪ್ರಭಾ ನದಿ ತೀರದಲ್ಲಿ ಪ್ರವಾಹ ಯಥಾಸ್ಥಿತಿಯಲ್ಲಿತ್ತು.

ನವಿಲುತೀರ್ಥ ಜಲಾಶಯದಿಂದ ನದಿಗೆ ಬಿಡಲಾಗುತ್ತಿರುವ ನೀರಿನ ಪ್ರಮಾಣ 21 ಸಾವಿರದಿಂದ 8 ಸಾವಿರ ಕ್ಯುಸೆಕ್‌ಗೆ ತಗ್ಗಿದೆಯಾದರೂ ನೆರೆಯಿಂದ ನಡುಗಡೆಯಾಗಿರುವ ಕುರುವಿನಕೊಪ್ಪ ಮತ್ತು ಲಕಮಾಪುರ, ಬೂದಿಹಾಳ ಗ್ರಾಮಗಳಲ್ಲಿ ಮಾತ್ರ ನೀರು ಇನ್ನೂ ತಗ್ಗಿಲ್ಲ.

ಕೊಣ್ಣೂರು ಬಳಿ ಹುಬ್ಬಳ್ಳಿ–ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಸೇತುವೆ ಮೇಲೆ ಹಾಗೂ ಹೊಳೆಆಲೂರು–ಬಾದಾಮಿ ಸಂಪರ್ಕಿಸುವ ಸೇತುವೆ ಮೇಲೆ ನದಿ ನೀರು ಇನ್ನೂ ಹರಿಯುತ್ತಿರುವುದರಿಂದ ಮೂರನೇ ದಿನವೂ ವಾಹನ ಸಂಚಾರ ಬಂದ್‌ ಆಗಿತ್ತು.

ಜಲಾಶಯದಿಂದ ನದಿಗೆ ಬಿಡಲಾಗುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಮಂಗಳವಾರ ಸಂಜೆ ಒಳಗೆ ಪ್ರವಾಹ ಇಳಿದು, ಯಥಾಸ್ಥಿತಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು