ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ ಜಿಲ್ಲೆ | ಮುಂದುವರಿದ ಪ್ರವಾಹ ಪರಿಸ್ಥಿತಿ

Last Updated 7 ಆಗಸ್ಟ್ 2019, 13:30 IST
ಅಕ್ಷರ ಗಾತ್ರ

ಕಾರವಾರ: ಜಿಲ್ಲೆಯಲ್ಲಿ ಬುಧವಾರ ಮಳೆಯ ಅಬ್ಬರ ಮಂಗಳವಾರಕ್ಕೆ ಹೋಲಿಸಿದರೆಕಡಿಮೆಯಾಗಿತ್ತು. ಅಪಾಯದಮಟ್ಟ ಮೀರಿ ಹರಿಯುತ್ತಿರುವ ನದಿಗಳಲ್ಲಿ ನೀರಿನ ಮಟ್ಟ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿತ್ತು.ಮತ್ತಷ್ಟು ಮಳೆಯ ಮುನ್ಸೂಚನೆ ಇರುವ ಕಾರಣ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಿಗೆ ಗುರುವಾರವೂ ಜಿಲ್ಲಾಡಳಿತ ರಜೆ ಘೋಷಿಸಿದೆ.

ಕದ್ರಾ ಅಣೆಕಟ್ಟೆಗೆ ಬುಧವಾರ 1.42 ಲಕ್ಷ ಕ್ಯುಸೆಕ್ ಒಳಹರಿವು ಇದ್ದ ಕಾರಣ 1.58 ಲಕ್ಷ ಕ್ಯುಸೆಕ್ ನೀರನ್ನು ಕಾಳಿ ನದಿಗೆ ಬಿಡಲಾಯಿತು. ಬೆಳಿಗ್ಗೆ 8ರವರೆಗೆ10 ಗೇಟ್‌ಗಳ ಮೂಲಕ ಒಟ್ಟು 39 ಟಿಎಂಸಿ ಅಡಿ ನೀರನ್ನು ನದಿಗೆ ಹರಿಸಲಾಗಿದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಕೆಳಭಾಗದಲ್ಲಿ ಪ್ರವಾಹ ಮುಂದುವರಿದಿದ್ದು, ಹತ್ತಾರು ಹಳ್ಳಿಗಳು, ನಡುಗಡ್ಡೆಗಳಲ್ಲಿ ನೀರು ತುಂಬಿದೆ. ಅಲ್ಲಿನ ನಿವಾಸಿಗಳು ತಾತ್ಕಾಲಿಕ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.

ದೊಡ್ಡ ಜಲಾಶಯಗಳಲ್ಲಿ ಒಂದಾಗಿರುವ ಸೂಪಾ ಅಣೆಕಟ್ಟೆಗೆಮಂಗಳವಾರ ಬೆಳಿಗ್ಗೆ 8ರಿಂದ ಬುಧವಾರ ಬೆಳಿಗ್ಗೆ 8ರ ಅವಧಿಯಲ್ಲಿಎರಡು ಮೀಟರ್‌ಗೂ ಅಧಿಕ ನೀರು ಹರಿದುಬಂದಿದೆ. 564 ಮೀಟರ್ ಎತ್ತರದ ಜಲಾಶಯ ಭರ್ತಿಯಾಗಲು ಇನ್ನು 10 ಮೀಟರ್ಸಂಗ್ರಹವಾಗಬೇಕಿದೆ.

ಅಂಕೋಲಾ ತಾಲ್ಲೂಕಿನ ಸುಂಕಸಾಳದಲ್ಲಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗಂಗಾವಳಿ ನದಿಯ ನೀರು ಇನ್ನೂ ಆವರಿಸಿಕೊಂಡಿದೆ.ಆದ್ದರಿಂದ ಇಲ್ಲಿವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಯಲ್ಲಾಪುರ ತಾಲ್ಲೂಕಿನ ಅರೆಬೈಲ್ ಘಟ್ಟದಲ್ಲಿ ಮಣ್ಣು ಕುಸಿದಿದ್ದು, ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡಿದೆ.

ಉಳಿದಂತೆ, ಕುಮಟಾ ತಾಲ್ಲೂಕಿನ ಕತಗಾಲದಲ್ಲಿ ಚಂಡಿಕಾ ಹೊಳೆಯ ಪ್ರವಾಹ ಇಳಿಕೆಯಾಗಿದ್ದು, ಶಿರಸಿ– ಕುಮಟಾ ರಾಜ್ಯ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸುತ್ತಿವೆ. ಶಿರಸಿ ತಾಲ್ಲೂಕಿನ ವರದಾ ನದಿಯಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದ್ದು, ಮತ್ತಷ್ಟು ಕೃಷಿ ಭೂಮಿಯನ್ನು ಕಬಳಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT