ಭಾನುವಾರ, ಜೂಲೈ 12, 2020
22 °C
ಎಸ್‌ಎಸ್‌ಎಲ್‌ಸಿ ಪರೀಕ್ಷಾರ್ಥಿಗಳಿಗೆ ಅಡಚಣೆ

ವಿಜಯಪುರ: ಡೋಣಿ ನದಿಯಲ್ಲಿ ಪ್ರವಾಹ; ಮುಳುಗಿದ ಸೇತುವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ ಬಿರುಸಿನ ಮಳೆಯಾದ ಪರಿಣಾಮ ಡೋಣಿ ನದಿ ಹಾಗೂ ಸೋಗಲಿ ಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು.

ಡೋಣಿ ನದಿ ಉಕ್ಕಿ ಹರಿದ ಪರಿಣಾಮ ತಾಳಿಕೋಟೆ–ಹಡಗಿನಾಳ ಸಂಪರ್ಕಿಸುವ ನೆಲಮಟ್ಟದ ಸೇತುವೆ ಮುಳುಗಿದ್ದರಿಂದ ಜನ, ವಾಹನ ಸಂಚಾರಕ್ಕೆ ಅಡಚಣೆಯಾಯಿತು.

ಅಪಾಯವನ್ನು ಲೆಕ್ಕಿಸದೇ ಹಡಗಿನಾಳ ಗ್ರಾಮಸ್ಥರು ಕೈ ಕೈ ಹಿಡಿದು, ನದಿ ದಾಟಿ ತಾಳಿಕೋಟೆಗೆ ಬಂದರು. ಮಧ್ಯಾಹ್ನದ ಬಳಿಕ ಪ್ರವಾಹ ಇಳಿಮುಖವಾಯಿತು.

ಸೋಗಲಿ ಹಳ್ಳ ತುಂಬಿ ಹರಿದ ಪರಿಣಾಮ ಕೂಚಬಾಳ, ಬಾವೂರ, ಮೂಕಿಹಾಳ, ಕಲ್ಲದೇವನಹಳ್ಳಿ, ಹಡಗಿನಾಳ ಗ್ರಾಮಗಳ ವ್ಯಾಪ್ತಿಯಲ್ಲಿ ವಾರದ ಹಿಂದೆ ಬಿತ್ತನೆಯಾಗಿರುವ ತೊಗರಿ ಹೊಲಗಳು ಜಲಾವೃತವಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ಪರೀಕ್ಷಾರ್ಥಿಗಳಿಗೆ ಅಡಚಣೆ:

ತಾಳಿಕೋಟೆ ತಾಲ್ಲೂಕಿನ ಹಡಗಿನಾಳ ಗ್ರಾಮದ ಮೂವರು ವಿದ್ಯಾರ್ಥಿಗಳು ಮೈಲೇಶ್ವರದ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಪರೀಕ್ಷೆ ಬರೆದು ಊರಿಗೆ ಮರಳುವ ವೇಳೆ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಸೇತುವೆ ಮುಳುಗಿದ ಕಾರಣ ಪೋಷಕರ ನೆರವಿನೊಂದಿಗೆ ಸುರಕ್ಷಿತವಾಗಿ ದಾಟಿದರು.

ನಾಲತವಾಡದ ಹಟ್ಟಿ ಹಳ್ಳ ಮತ್ತು ವಾರದೈನ ಕೆರೆಯು ಉಕ್ಕಿ ಹರಿದ ಪರಿಣಾಮ ಗ್ರಾಮದ ಹೊಲದ ಮನೆಯಲ್ಲಿದ್ದ ಮನೆಗಳು ಜಲಾವೃತವಾದವು. ನೀರಿನಲ್ಲಿ ಸಿಲುಕಿಕೊಂಡಿದ್ದ ಎಸ್ಎಸ್ಎಲ್‌ಸಿ ಪರೀಕ್ಷಾರ್ಥಿ ಅರ್ಷದ್ ಮೂಲೇಘರ್‌ ಮತ್ತು ಕುಟುಂಬದವರು ನೆರೆಹೊರೆಯವರ ಸಹಕಾರದಿಂದ ಸುರಕ್ಷಿತವಾಗಿ ಗ್ರಾಮಕ್ಕೆ ಮರಳಿದರು. ಬಳಿಕ ವಿದ್ಯಾರ್ಥಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದನು.

ವಿಜಯಪುರ, ಬಸವನ ಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕು ವ್ಯಾಪ್ತಿಯಲ್ಲೂ ಭಾನುವಾರ ರಾತ್ರಿ ಉತ್ತಮ ಮಳೆ ಸುರಿದ ಪರಿಣಾಮ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು