ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಪರಿಹಾರ: ₹188 ಕೋಟಿ ಸಂಗ್ರಹ

Last Updated 25 ಅಕ್ಟೋಬರ್ 2019, 4:13 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ವಿಕೋಪ ಪರಿಹಾರ ನಿಧಿಗೆ ವಿವಿಧ ಸಂಘಟನೆಗಳು, ದಾನಿಗಳು, ಕಂಪನಿಗಳು ನೆರವು ನೀಡುವುದನ್ನು ಮುಂದುವರಿಸಿದ್ದು,ಈವರೆಗೆ ₹188 ಕೋಟಿ ಸಂಗ್ರಹವಾಗಿದೆ.

ತೀವ್ರ ಪ್ರಮಾಣದಲ್ಲಿ ಪ್ರವಾಹ ಉಂಟಾದ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದಾರೆ. ಕಳೆದ ಆಗಸ್ಟ್ 13ರಿಂದ ದೇಣಿಗೆ ಸಂಗ್ರಹಿಸುತ್ತಿದ್ದು, ಈವರೆಗೆ 4,105 ಮಂದಿ ಹಣ ನೀಡಿದ್ದಾರೆ. ಆ. 20ರಂದು ಒಂದೇ ದಿನ ₹39.15 ಕೋಟಿ ಹರಿದು ಬಂದಿದೆ.

ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಮಳೆ ಅನಾಹುತ ಸಂಭವಿಸಿದ ಸಮಯದಲ್ಲಿ ₹186 ಕೋಟಿ ಸಂಗ್ರಹವಾಗಿದ್ದು, ಅದರಲ್ಲಿ ಇನ್ನೂ ₹97.17 ಕೋಟಿ ಉಳಿದಿದೆ. ಈ ಹಣವನ್ನೂ ನೆರೆ ಪರಿಹಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT