ಮಂಗಳವಾರ, ನವೆಂಬರ್ 19, 2019
25 °C

ನೆರೆಪೀಡಿತ ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹25 ಕೋಟಿ: ಯಡಿಯೂರಪ್ಪ ಭರವಸೆ

Published:
Updated:

ಬೆಂಗಳೂರು: ಪ್ರವಾಹ ಮತ್ತು ಮಳೆಯಿಂದ ಹಾನಿಗೀಡಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ತಲಾ ₹25 ಕೋಟಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ವಿವಿಧ ಜಿಲ್ಲೆಗಳ ಬಿಜೆಪಿ ಶಾಸಕರ ಜತೆ ಚರ್ಚೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಈ ವಿಷಯ ತಿಳಿಸಿದರು.

ಶಾಸಕರ ಜತೆಗೆ ಅವರ ಕ್ಷೇತ್ರಗಳಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಮಳೆ ಮತ್ತು ಪ್ರವಾಹ ಪೀಡಿತ ಪ್ರದೇಶಗಳ ಶಾಸಕರು ಹೆಚ್ಚಿನ ಸಮಸ್ಯೆಗಳನ್ನು ಹೇಳಿಕೊಂಡರು. ಪ್ರವಾಹ ಪೀಡಿತ ಪ್ರದೇಶದಲ್ಲಿ ಮನೆಗಳನ್ನು ಕಟ್ಟಿಸಿಕೊಡುವುದು ಸರ್ಕಾರದ ಆದ್ಯತೆಯಾಗಿದೆ. ₹25 ಕೋಟಿ ಅನುದಾನದಲ್ಲಿ ನೀರಾವರಿ ಯೋಜನೆಗಳು, ಕೆರೆ ತುಂಬಿಸುವ ಯೋಜನೆ, ಶಾಲಾ ಕೊಠಡಿಗಳ ರಿಪೇರಿ ಮುಂತಾದ ಕಾರ್ಯ ಕೈಗೆತ್ತಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು.

ಇವತ್ತು ಬಿಜೆಪಿ ಶಾಸಕರ ಸಭೆಯನ್ನು ಮಾತ್ರ ಕರೆದಿದ್ದೆ. ಮುಂದಿನ ದಿನಗಳಲ್ಲಿ ಇತರ ಎಲ್ಲ ಪಕ್ಷಗಳ ಶಾಸಕರ ಸಭೆಯನ್ನೂ ಕರೆಯುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.

ಪ್ರತಿಕ್ರಿಯಿಸಿ (+)