ಬುಧವಾರ, ಏಪ್ರಿಲ್ 14, 2021
32 °C

ರಾಜೀನಾಮೆ ಹಿಂಪಡೆಯಲ್ಲ, ರಾಮಲಿಂಗಾರೆಡ್ಡಿಯನ್ನು ಅನುಸರಿಸಲ್ಲ: ಎಸ್‌.ಟಿ. ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯಲ್ಲ ಹಾಗೂ ಮಾಜಿ ಸಚಿವ ರಾಮಲಿಂಗಾರೆಡ್ಡಿಯವರನ್ನು ನಾವು ಅನುಸರಿಸುವುದಿಲ್ಲ ಎಂದು ಅತೃಪ್ತ ಶಾಸಕ ಎಸ್‌.ಟಿ.ಸೋಮಶೇಖರ್‌ ವಿಡಿಯೊ ಮುಖಾಂತರ ತಿಳಿಸಿದ್ದಾರೆ.

ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗುವ ಕೆಲವೇ ನಿಮಿಷಗಳ ಮೊದಲು ವಿಡಿಯೊವನ್ನು ಬಿಡುಗಡೆ ಮಾಡಿದ್ದಾರೆ.

ಮುನಿರತ್ನ, ಬೈರತಿ ಬಸವರಾಜ್‌, ರಾಮಲಿಂಗಾರೆಡ್ಡಿ ಹಾಗೂ ನಾನು ಒಟ್ಟಾಗಿ ರಾಜೀನಾಮೆ ಕೊಟ್ಟಿದ್ದೇವು. ಒಮ್ಮೆ ರಾಜೀನಾಮೆ ನೀಡಿದ ಬಳಿಕ ಮತ್ತೆ ವಾಪಾಸು ಪಡೆಯಬಾರದು ಎಂದು ನಾವು ಒಟ್ಟಾಗಿ ಕುಳಿತು ಮಾತನಾಡಿಕೊಂಡಿದ್ದೇವು. ಆದರೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ವಾಪಾಸು ಪಡೆಯುವುದಾಗಿ ಹೇಳಿರುವುದನ್ನು ನಾವು ಮಾಧ್ಯಮಗಳ ಮೂಲಕ ಗಮನಿಸಿದ್ದೇವೆ. 

ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯಲ್ಲ ಹಾಗೂ ರಾಮಲಿಂಗಾರೆಡ್ಡಿ ಅವರನ್ನು ಅನುಸರಿಸುವುದಿಲ್ಲ ಎಂದು ಎಸ್‌.ಟಿ.ಸೋಮಶೇಖರ್ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು