ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಕ್ಕಿ, ಗೋಧಿ

Last Updated 23 ಏಪ್ರಿಲ್ 2018, 20:01 IST
ಅಕ್ಷರ ಗಾತ್ರ

ನವದೆಹಲಿ : ಎಲ್ಲ ಸರ್ಕಾರಿ ಹಾಗೂ ಖಾಸಗಿ ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ತಿಂಗಳಿಗೆ ತಲಾ 15 ಕೆ.ಜಿ. ಆಹಾರ ಧಾನ್ಯವನ್ನು ಸಬ್ಸಿಡಿ ದರದಲ್ಲಿ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

ಎಸ್‌ಸಿ/ಎಸ್ಟಿ ವಿದ್ಯಾರ್ಥಿಗಳೂ ಸೇರಿದಂತೆ ಒಟ್ಟು 1 ಕೋಟಿ ವಿದ್ಯಾರ್ಥಿಗಳು ಈ ಯೋಜನೆಯಿಂದ ಲಾಭ ಪಡೆಯಲಿದ್ದು, ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ₹4 ಸಾವಿರ ಕೋಟಿ ಹೊರೆ ಬೀಳಲಿದೆ.

ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದಲಿತರು ಹಾಗೂ ಹಿಂದುಳಿದವರನ್ನು ಓಲೈಸಲು ವಿವಿಧ ರಾಜಕೀಯ ಪಕ್ಷಗಳು ಯತ್ನಿಸುತ್ತಿರುವ ಮಧ್ಯೆಯೇ ಕೇಂದ್ರ ಈ ಯೋಜನೆಯನ್ನು ಪ್ರಕಟಿಸಿದೆ.

ಸರ್ಕಾರವು ಬಿಪಿಎಲ್ ದರದಲ್ಲಿ ಧಾನ್ಯ ವಿತರಿಸಲಿದೆ. ಗೋಧಿಯನ್ನು ಕೆ.ಜಿಗೆ ₹4.15 ಹಾಗೂ ಅಕ್ಕಿಯನ್ನು ಕೆ.ಜಿಗೆ ₹5.65ಕ್ಕೆ ನೀಡಲಿದೆ ಎಂದು ಆಹಾರ ಸಚಿವ ರಾಮ್‌ವಿಲಾಸ್ ಪಾಸ್ವಾನ್ ಸೋಮವಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT