ಬುಧವಾರ, ಏಪ್ರಿಲ್ 14, 2021
24 °C

ಅರಣ್ಯ ಇಲಾಖೆ: 5 ವರ್ಷದಲ್ಲಿ 3,085 ಹುದ್ದೆ ಸೃಷ್ಟಿಗೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಮುಂದಿನ 5 ವರ್ಷಗಳಲ್ಲಿ 16 ಎಸಿಎಫ್‌, 67 ಆರ್‌ಎಫ್‌ಒ ಹಾಗೂ 751 ಉಪ ವಲಯ ಅರಣ್ಯಾಧಿಕಾರಿ ಸಹಿತ 3,085 ಹೊಸ ಹುದ್ದೆಗಳನ್ನು ಸೃಷ್ಟಿಸಲು ಸರ್ಕಾರ ಅನುಮತಿ ನೀಡಿದೆ.

ಅರಣ್ಯ ಇಲಾಖೆಯ ಎಲ್ಲಾ ವೃಂದಗಳ ಪುನರಾವಲೋಕನ ಮತ್ತು ಸಂವರ್ಧನೆ ಕುರಿತಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ದೀಪಕ್‌ ಶರ್ಮಾ ನೇತೃತ್ವದ ಸಮಿತಿಯನ್ನು ರಚಿಸಲಾಗಿತ್ತು. ಅದು ನೀಡಿದ ಶಿಫಾರಸಿನಂತೆ ಅರಣ್ಯ ಇಲಾಖೆಗೆ ಅಗತ್ಯವಿರುವ ಹುದ್ದೆಗಳ ಸೃಷ್ಟಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು