ಬುಧವಾರ, ಅಕ್ಟೋಬರ್ 23, 2019
27 °C
ಚೌಡಳ್ಳಿ: ಹುಲಿ ಪತ್ತೆಗೆ ಕಾರ್ಯಾಚರಣೆ ಮುಂದುವರಿಕೆ

ಡ್ರೋನ್‌ ಬಳಸಿ ಹುಲಿ ಶೋಧ

Published:
Updated:

ಬೆಂಗಳೂರು: ‘ಗುಂಡ್ಲುಪೇಟೆ ತಾಲ್ಲೂಕಿನ ಚೌಡಳ್ಳಿ ಗ್ರಾಮದಲ್ಲಿ ಶಿವಲಿಂಗಪ್ಪ ಅವರ ಮೇಲೆ ದಾಳಿ ಮಾಡಿದ ಹುಲಿ ಪತ್ತೆಗೆ ಡ್ರೋನ್‌ ಕ್ಯಾಮೆರಾ ಬಳಸಿ ಶೋಧ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದು ಅರಣ್ಯ ಸಚಿವ ಸಿ.ಸಿ.ಪಾಟೀಲ ವಿಧಾನಸಭೆಗೆ ತಿಳಿಸಿದರು.

ಸಿ.ಎಸ್‌.ನಿರಂಜನ್‌ ಕುಮಾರ್‌ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ‘ಚೌಡಳ್ಳಿ ಮತ್ತು ಹುಂಡಿಪುರ ಗ್ರಾಮಗಳ ಆಸುಪಾಸಿನ ಪ್ರದೇಶಗಳಲ್ಲಿ ಉಪಟಳ ನೀಡುತ್ತಿರುವ ಹುಲಿಯನ್ನು ಸೆರೆ ಹಿಡಿಯಲು 120ಕ್ಕೂ ಹೆಚ್ಚು ಸಿಬ್ಬಂದಿ ಐದು ತಂಡಗಳಲ್ಲಿ ಶೋಧ ಕಾರ್ಯನಿರತರಾಗಿದ್ದಾರೆ. ಹುಲಿಯ ಚಲನವಲನ ಗಮನಿಸಲು 200ಕ್ಕೂ ಹೆಚ್ಚು ಕಡೆ ಕ್ಯಾಮೆರಾ ಅಳವಡಿಸಲಾಗಿದೆ’ ಎಂದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)