ಭಾನುವಾರ, ಜನವರಿ 26, 2020
21 °C

ಗೋಲಿಬಾರ್‌ನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಿದ ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಮೃತಪಟ್ಟವರ ಕುಟುಂಬ ಹಾಗೂ ಗಾಯಾಳುಗಳನ್ನು ಭೇಟಿ ಮಾಡಿ ವಿಧಾನಸಭೆ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ ಸಾಂತ್ವನ ಹೇಳಿದರು. 

ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಕಂದಕ್ ಪ್ರದೇಶಕ್ಕೆ ತೆರಳಿ ಮೃತ ಜಲೀಲ್ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದರು. ಬಳಿಕ ಕುದ್ರೋಳಿಗೆ ತೆರಳಿ ಮೃತ ನೌಸೀನ್ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. 

ಮೃತ ಅಬ್ದುಲ್ ಜಲೀಲ್‌ ಮತ್ತು ನೌಸೀನ್ ಕುಟುಂಬಗಳಿಗೆ ಸಿದ್ದರಾಮಯ್ಯ ಅವರು ತಲಾ ₹ 7.5 ಲಕ್ಷ ನೆರವು ನೀಡಿದರು. ಎರಡೂ ಮೃತರ ಕುಟುಂಬಗಳಿಗೆ ಸಿದ್ದರಾಮಯ್ಯ ವೈಯಕ್ತಿಕವಾಗಿ ತಲಾ ₹ 5 ಲಕ್ಷ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ತಲಾ ₹ 2.5  ಲಕ್ಷ  ಮೊತ್ತದ ಚೆಕ್ ವಿತರಿಸಿದರು.

ಮೃತರ ಮನೆಗಳಿಗೆ ಭೇಟಿ ನೀಡಿದ ಬಳಿಕ ಮಂಗಳೂರು ಉತ್ತರ(ಬಂದರು) ಪೊಲೀಸ್ ಠಾಣೆಯ ಪ್ರದೇಶಕ್ಕೆ ಭೇಟಿ ನೀಡಿರುವ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದರು. 

ಗುರುವಾರ ನಗರದಲ್ಲಿ ನಡೆದ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದರು. ಸಿದ್ದರಾಮಯ್ಯ ಅವರ ಮಂಗಳೂರು ಭೇಟಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಇದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು