ಗುರುವಾರ , ಜನವರಿ 23, 2020
28 °C

1 ಜೆಎನ್‌ಯು ಹತ್ತಿಕ್ಕಿದರೆ ನೂರು ಜೆಎನ್‌ಯು ಸಿಡಿದೇಳುತ್ತವೆ: ಸಸಿಕಾಂತ್ ಸೆಂಥಿಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ಕೇಂದ್ರ ಸರ್ಕಾರ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯವನ್ನು ಹತ್ತಿಕ್ಕಲು ಹೊರಟಿದೆ‌. ಇದನ್ನೇ ಮುಂದುವರಿಸಿದರೆ ನೂರು ವಿವಿಗಳ ವಿದ್ಯಾರ್ಥಿಗಳು ಸಿಡಿದೇಳುತ್ತಾರೆ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕೇಂದ್ರ ತನ್ನ ಮೊಂಡುತನ ಬಿಟ್ಟು ಜನಗಳ, ವಿದ್ಯಾರ್ಥಿಗಳ ಮಾತನ್ನು ಆಲಿಸಬೇಕು. ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಜನಗಳೇ ಸ್ವಯಂ ಪ್ರೇರಿತರಾಗಿ ಬೀದಿಗಿಳಿದಿದ್ದಾರೆ. ಇದರಿಂದ ಹತಾಶವಾದ ಕೇಂದ್ರ ‌ಸರ್ಕಾರ ಬುಲೆಟ್ ಮೂಲಕ ತಡೆಯಲು ‌ಹೊರಟಿದೆ. ಇದು ಅಪಾಯಕಾರಿ. ಎಲ್ಲರೂ ಇದರ ವಿರುದ್ಧ ಹೋರಾಟ ನಡೆಸಬೇಕಿದೆ ಎಂದರು.

ರಾಜಕೀಯ ಸೇರಲ್ಲ: ಮುಂದಿನ ದಿನಗಳಲ್ಲಿ ರಾಜಕೀಯ ‌ಸೇರುವ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಎನ್‌ಪಿಆರ್, ಎನ್‌ಆರ್‌ಸಿ ಎರಡೂ ಒಂದೇ: ಜನರನ್ನು ದಿಕ್ಕು ತಪ್ಪಿಸಲು ಸರ್ಕಾರ ಎನ್‌ಆರ್‌ಸಿ ಬದಲು ಎನ್‌ಪಿಆರ್‌ ಜಾರಿಗೆ ತಂದಿದೆ. ಇದನ್ನು ಗೃಹ ಇಲಾಖೆ ಮೇಲ್ವಿಚಾರಣೆಯಲ್ಲಿ ನಡೆಸುತ್ತಿದೆ. ಸಿಎಎಯಿಂದ ಯಾರ ಪೌರತ್ವವನ್ನು ಕಸಿಯುವ ಉದ್ದೇಶವಿಲ್ಲ ಎಂಬುದು ಹಸಿ ಸುಳ್ಳು. ಇದರಿಂದ ಮುಸ್ಲಿಮರಷ್ಟೇ ಅಲ್ಲ ಎಲ್ಲರೂ ಪೌರತ್ವವನ್ನು ಸಾಬೀತುಪಡಿಸಬೇಕಾಗುತ್ತದೆ. ನಿರುದ್ಯೋಗ, ಆರ್ಥಿಕ ‌ಹಿಂಜರಿತದಂತಹ ಸಮಸ್ಯೆಗಳು ದೇಶವನ್ನು ಕಾಡುತ್ತಿರುವಾಗ ಈ  ಪ್ರಕ್ರಿಯೆ ಅನಿವಾರ್ಯವಿದೆಯೇ ಎಂದು ಪ್ರಶ್ನಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು