ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಪತ್ರ

ಕೇಂದ್ರ ಗೃಹ ಸಚಿವರನ್ನು ಉದ್ದೇಶಿಸಿ ಬರೆದಿರುವ ಪತ್ರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ
Last Updated 10 ಡಿಸೆಂಬರ್ 2019, 15:54 IST
ಅಕ್ಷರ ಗಾತ್ರ

ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್‌ ಸೆಂಥಿಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

‘ಇದೊಂದು ಅಮಾನವೀಯ ನಡೆಯಾಗಿದೆ. ಭಾರತದ ಪ್ರಜೆಗಳೆಲ್ಲ ಈಗ ಅಂಚಿನಲ್ಲಿರುವವರ ಪರವಾಗಿ ನಿಲ್ಲಬೇಕಾಗಿದೆ’ ಎಂದು ಅವರು ಟ್ವೀಟ್‌ ಮೂಲಕ ಕರೆ ನೀಡಿದ್ದಾರೆ.

‘ಮಸೂದೆ ಅಂಗೀಕಾರವಾದರೆ, ಆಧುನಿಕ ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಲಿದೆ. ನಾನು ಪೌರತ್ವ ಮಸೂದೆಯನ್ನು ಸ್ವೀಕರಿಸುವುದಿಲ್ಲ, ಭಾರತೀಯನೆಂದು ಪೌರತ್ವವನ್ನು ಸಾಬೀತುಪಡಿಸಲು ಅಗತ್ಯವಾದ ದಾಖಲೆಗಳನ್ನು ಸಲ್ಲಿಸುವುದಿಲ್ಲ. ನನ್ನ ಅಸಹಕಾರಕ್ಕಾಗಿ ನನ್ನ ಮೇಲೆ ಕ್ರಮ ಕೈಗೊಂಡರೆ ಸ್ವೀಕರಿಸುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಮಸೂದೆಯನ್ನು ಮಂಡಿಸುವ ಮೂಲಕ ಸರ್ಕಾರ ದ್ವೇಷದ ಮೂಲ ಸಿದ್ಧಾಂತವನ್ನು ಬಹಿರಂಗಪಡಿಸಿದೆ. ಒಂದೇ ದೇಶದಲ್ಲಿ ವಾಸವಾಗಿದ್ದ ನಮ್ಮ ಮುಸ್ಲಿಂ ಮತ್ತು ಆದಿವಾಸಿ ಸಹೋದರ ಸಹೋದರಿಯರು ದೇಶದ ಜಾತ್ಯತೀತ ನೀತಿಗಳ ಬಗ್ಗೆ ಭಯ ಪಡುವಂತಾಗಿದೆ. ನಮ್ಮನ್ನು ವಿಭಜಿಸುವ ಪ್ರಯತ್ನದ ವಿರುದ್ದ ಎಲ್ಲ ನಾಗರಿಕರು ಕೈ ಜೋಡಿಸಿ ಹೋರಾಡಲಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT