ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ಮಾಜಿ ಪ್ರಧಾನಿ ದೇವೇಗೌಡ ವಿರೋಧ

ಬೆಂಗಳೂರು: ಇಡೀ ರಾಜ್ಯ ಕೊರೊನಾ ವಿರುದ್ಧ ಸಮರ ನಡೆಸುತ್ತಿರುವ ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಡೀ ರಾಜ್ಯ ಕೊರೊನಾ ವಿರುದ್ಧ ಸಮರ ನಡೆಸುತ್ತಿರುವ ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರೋದು ಸರಿಯಲ್ಲ. ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು.
— H D Devegowda (@H_D_Devegowda) May 14, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.