ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಚನೆ ಪ್ರಕರಣ: ಪ್ರಮುಖ ಆರೋಪಿಯ ಸಹೋದರ ಬಂಧನ

Last Updated 20 ಜೂನ್ 2019, 18:52 IST
ಅಕ್ಷರ ಗಾತ್ರ

ತುಮಕೂರು: ಬೆಂಗಳೂರಿನ ಐಎಂಎ (ಐ ಮಾನಿಟರಿ ಅಡ್ವೈಸರಿ) ಕಂಪನಿ ಮಾದರಿಯಲ್ಲಿ ನಗರದ ಈಜಿಮೈಂಡ್ ಮಾರ್ಕೆಟಿಂಗ್ ಇಂಡಿಯಾ ಪ್ರೈ.ಲಿ ಹೆಸರಿನ ಕಂಪನಿಯು ಜನರಿಂದ ನೂರಾರು ಕೋಟಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಕಂಪನಿಯ ಮುಖ್ಯಸ್ಥ ಮಹಮ್ಮದ್ ಅಸ್ಲಂ ಅವರ ಸಹೋದರನನ್ನು ಬಂಧಿಸಿದ್ದಾರೆ.

ಅಸ್ಲಂ ಅವರ ಪತ್ನಿ ಸೂಫಿಯಾ ಖಾನಂ ಅವರನ್ನು ಸೋಮವಾರ ಬಂಧಿಸಿದ್ದ ಪೊಲೀಸರು, ಮಂಗಳವಾರ ಅಸ್ಲಂ ಅವರ ಸಹೋದರ ಕಲೀಮುಲ್ಲಾ ಅವರನ್ನು ವಿಚಾರಣೆಗೊಳಪಡಿಸಿದ್ದರು. ಗುರುವಾರ ಕಲೀಮುಲ್ಲಾ ಅವರನ್ನು ಬಂಧಿಸಿದ್ದಾರೆ.

ಕಂಪನಿಯ ₹ 50 ಲಕ್ಷ ವ್ಯವಹಾರಕ್ಕೆ ಸಂಬಂಧಿಸಿದಂತೆ ದಾಖಲಾತಿಗಳಿಗೆಕಲೀಮುಲ್ಲಾ ಸಹಿ ಹಾಕಿದ್ದು ವಿಚಾರಣೆ ಸಂದರ್ಭದಲ್ಲಿ ಕಂಡು ಬಂದಿದ್ದರಿಂದ ತನಿಖಾಧಿಕಾರಿ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರದವರೆಗೆ 48 ದೂರುಗಳು ದಾಖಲಾಗಿದ್ದು, ಮತ್ತೆ ದೂರು ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT