ಸೋಮವಾರ, ಜೂಲೈ 6, 2020
22 °C

ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನಿಖೆ, ಸ್ಥಳಪರಿಶೀಲನೆಗೆ ಸ್ಪೀಕರ್ ತಡೆಯಾಜ್ಞೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನಿಖೆ, ಸ್ಥಳಪರಿಶೀಲನೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಡೆಯಾಜ್ಞೆ ನೀಡಿದ್ದು, ಯಾವುದೇ ಅಧ್ಯಯನ ಪ್ರವಾಸ ಕೈಗೊಳ್ಳದಿರಲು ಆದೇಶ ಹೊರಡಿಸಿದ್ದಾರೆ. 

ಸ್ಪೀಕರ್ ಆದೇಶಕ್ಕೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಟ್ವಿಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಭ್ರಷ್ಠಾಚಾರ ಕುರಿತು ತನಿಖೆ ಮಾಡಲು ಸ್ಪೀಕರ್ ನೀಡಿರುವ ತಡೆ ಸಂವಿಧಾನ ಮತ್ತು ಕಾನೂನಾತ್ಮಕ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತದೆ. ವಿಧಾನಮಂಡಲದ ಸಮಿತಿಗಳ ಅಧಿಕಾರ ಮೊಟಕುಮಾಡುವ ಪ್ರಯತ್ನ ತಕ್ಷಣ ಕೈಬಿಡಿ ಎಂದು ಮನವಿ ಮಾಡಿದ್ದಾರೆ.

ಲಘು ಪ್ರಕಟಣೆ 104ನ್ನು ಹಿಂಪಡೆದು ಭ್ರಷ್ಠಾಚಾರ ಪೋಷಿಸುವ ಕ್ರಮವಾಗಿರುವ ಈ ಆದೇಶವನ್ನು ಹಿಂತೆಗೆದುಕೊಳ್ಳಲು ಎಚ್.ಕೆ.ಪಾಟೀಲ ಆಗ್ರಹಿಸಿದ್ದಾರೆ. 

ಇದನ್ನೂ ಓದಿ... ಕೊರೊನಾ: ಲೂಟಿಗೆ ‘ರಹದಾರಿ’

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.