ಸ್ವಾತಂತ್ರ್ಯಯೋಧ, ಶತಾಯುಷಿ ನರಸಿಂಹ ಗಣಪತಿ ಹೆಗಡೆ

ಬುಧವಾರ, ಜೂನ್ 26, 2019
28 °C

ಸ್ವಾತಂತ್ರ್ಯಯೋಧ, ಶತಾಯುಷಿ ನರಸಿಂಹ ಗಣಪತಿ ಹೆಗಡೆ

Published:
Updated:

ಸಿದ್ದಾಪುರ: ಹಿರಿಯ ಸ್ವಾತಂತ್ರ್ಯಯೋಧ ನರಸಿಂಹ ಗಣಪತಿ ಹೆಗಡೆ ಮಗೇಗಾರ (100) ಭಾನುವಾರ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಸ್ವಾತಂತ್ರ್ಯ ಹೋರಾಟದ ಅಂಗವಾಗಿ ತಾಲ್ಲೂಕಿನಲ್ಲಿ 1931ರಲ್ಲಿ ನಡೆದಿದ್ದ ಜಂಗಲ್ ಸತ್ಯಾಗ್ರಹ, ನಂತರ ನಡೆದ ಕರ ನಿರಾಕರಣೆ ಚಳವಳಿ ಹಾಗೂ ಚಲೇಜಾವ್ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ನರಸಿಂಹ ಹೆಗಡೆ, ಚಲೇಜಾವ್ ಚಳವಳಿಯ ಸಂದರ್ಭದಲ್ಲಿಯೇ ಒಂದು ವರ್ಷ ಸೆರೆವಾಸ ಅನುಭವಿಸಿದ್ದರು.

ಮಗೇಗಾರಿನ ಮಹಾಗಣಪತಿ ನಾಟ್ಯ ಕಲಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು , ಮಹಾಗಣಪತಿ ದೇವಾಲಯದ ಅಷ್ಟಬಂಧ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಅವರು ಕೆಲಸ ಮಾಡಿದ್ದರು. ಭಾನ್ಕುಳಿ ಮಠದಲ್ಲಿಯೂ ಸೇವೆ ಸಲ್ಲಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !