ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 19 ನಿಯಂತ್ರಣಕ್ಕಾಗಿ ಎಲ್ಲಾ ಜಿಲ್ಲೆಗಳಿಗೆ ₹86.25 ಕೋಟಿ ಅನುದಾನ ಬಿಡುಗಡೆ

Last Updated 29 ಏಪ್ರಿಲ್ 2020, 12:21 IST
ಅಕ್ಷರ ಗಾತ್ರ
ADVERTISEMENT
""
""
""

ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕಾಗಿಮುಂಜಾಗ್ರತಾ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ₹86.25 ಕೋಟಿ ಅನುದಾನವನ್ನು ಸರ್ಕಾರ ಬುಧವಾರಬಿಡುಗಡೆ ಮಾಡಿದೆ.

ಕಂದಾಯ ಇಲಾಖೆಯು ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಈ ಹಣವನ್ನು ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿಕೂಡಲೆ ಎಲ್ಲಾ ಜಿಲ್ಲೆಗಳಿಗೂ ಅಗತ್ಯವಿರುವ ಹಣಕಾಸು ನೆರವು ನೀಡಬೇಕೆಂದು ನಿರ್ದೇಶಿಸಿತ್ತು.ಈ ಆದೇಶದ ಅನ್ವಯ ಕಂದಾಯ ಇಲಾಖೆಯ ಜಂಟಿ ಕಾರ್ಯದರ್ಶಿ ಈ ಹಣ ಬಿಡುಗಡೆ ಮಾಡಿದ್ದಾರೆ.

ಈ ಹಣವನ್ನು ಜನರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ, ಆಹಾರ, ಬಟ್ಟೆಗಳಿಗೆ, ಗಂಟಲು ದ್ರವ ಸಂಗ್ರಹಣೆ, ಲ್ಯಾಬ್ ಸಲಕರಣೆಗಳ ಖರೀದಿಗೆಖರ್ಚು ಮಾಡುವಂತೆ ಷರತ್ತು ವಿಧಿಸಲಾಗಿದೆ.ಈ ಅನುದಾನವನ್ನು ಬೇರೆ ಯಾವ ಉದ್ದೇಶಕ್ಕಾಗಿಯೂ ಬಳಸಕೂಡದು, ಬಳಸಿದ ಹಣಕ್ಕೆ ಹಣ ಬಳಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಹಣ ಬಳಕೆಯಲ್ಲಿ ಯಾವುದೇ ಲೋಪವಾದಲ್ಲಿ ನೇರವಾಗಿ ಜಿಲ್ಲಾಧಿಕಾರಿಯನ್ನೇಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆಯಾ ಜಿಲ್ಲೆಗಳು ಹಾಗೂ ಹಣದ ವಿವರ ಕೆಳಕಂಡಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT