ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರಕ್ಕೆ ವರದಿಕೊಟ್ಟ ಪರಮೇಶ್ವರ

Last Updated 6 ಜನವರಿ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ನಡುವೆ ಒಮ್ಮತ ಮೂಡಿಸುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದ ಶಾಸಕ ಡಾ.ಜಿ.ಪರಮೇಶ್ವರ ಅವರು ಈ ಸಂಬಂಧ ಕೇಂದ್ರ ನಾಯಕರಿಗೆ ವರದಿ ಸಲ್ಲಿಸಿದ್ದಾರೆ.

‘ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ರಾಜ್ಯ ನಾಯಕರು ಬದ್ಧರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ವಿಧಾನಸಭೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಮುಖಂಡರು ನೀಡಿರುವ ರಾಜೀನಾಮೆ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವುದು ಉತ್ತಮ. ರಾಜೀನಾಮೆ ಒಪ್ಪಿಕೊಳ್ಳಿ ಅಥವಾ ತಿರಸ್ಕರಿಸುವ ನಿರ್ಧಾರವನ್ನು ತಕ್ಷಣ ಮಾಡಬೇಕು’ ಎಂದು ಸಲಹೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜತೆ ದೂರವಾಣಿಯಲ್ಲಿ ಮಾತನಾಡಿ, ಸಭೆಯಲ್ಲಿ ಚರ್ಚೆಯಾದ ವಿಚಾರಗಳು, ವ್ಯಕ್ತವಾದ ಅಭಿಪ್ರಾಯಗಳ ಬಗ್ಗೆ ತಿಳಿಸಿದರು ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹಿರೀಕರ ನಡುವೆ ಭಿನ್ನಮತ ತೀವ್ರಗೊಂಡಿತ್ತು. ದೆಹಲಿಗೆ ಹೋಗಿ ಒಬ್ಬರ ಮೇಲೆ ಮತ್ತೊಬ್ಬರು ದೂರು ಸಲ್ಲಿಸುತ್ತಲೇ ಬಂದಿದ್ದರು. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ ವರಿಷ್ಠರು, ‘ಮೊದಲು ತಮ್ಮಲ್ಲಿರುವ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಬೇಕು. ನಂತರವಷ್ಟೇ ನಮ್ಮನ್ನು ಭೇಟಿಯಾಗಬೇಕು. ಅಲ್ಲಿಯವರೆಗೂ ದೆಹಲಿಗೆ ಬರುವುದು ಬೇಡ’ ಎಂದು ಕಟ್ಟಪಟ್ಟಣೆ ಮಾಡಿದ್ದರು. ಸಮನ್ವಯ ಸಾಧಿಸುವ ಜವಾಬ್ದಾರಿಯನ್ನು ಪರಮೇಶ್ವರ್ ಅವರಿಗೆ ವಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT