ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿ ದಾಳಿ| ಪರಮೇಶ್ವರ ಆಪ್ತ ರಮೇಶ್ ಆತ್ಮಹತ್ಯೆಗೂ ಮುನ್ನ ಹೇಳಿದ್ದೇನು? ನಾನು ಬಡವ..

Last Updated 12 ಅಕ್ಟೋಬರ್ 2019, 9:30 IST
ಅಕ್ಷರ ಗಾತ್ರ

ಬೆಂಗಳೂರು:ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಇದಕ್ಕೂ ಮುನ್ನ ತನ್ನ ಇಬ್ಬರು ಆಪ್ತರ ಬಳಿ ಪೋನ್‌ನಲ್ಲಿ ಮಾತನಾಡಿ, ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ತನ್ನಿಬ್ಬರು ಆಪ್ತರ ಜತೆ ಮತನಾಡಿ ರಮೇಶ್‌ ನಾಪತ್ತೆಯಾಗಿದ್ದರು.ಬಳಿಕ ಶವವಾಗಿ ಪತ್ತೆಯಾಗಿದ್ದಾರೆ.

ಇದಕ್ಕೂ ಮುನ್ನ ತನ್ನ ಆಪ್ತರಿಗೆ‌ ಪೋನ್‌ ಕರೆ ಮಾಡಿ ಮಾತನಾಡಿದ್ದ ಅವರು, 'ನಾನು ಬಡವ. ನನ್ನ ಮನೆಯ ಮೇಲೆ ಐಟಿ ದಾಳಿ ಮಾಡಿದ್ದಾರೆ. ನಾನು ಅವರ ವಿಚಾರಣೆ ಎದುರಿಸೋದಕ್ಕೆ ಆಗೋದಿಲ್ಲ. ಈಗ ನಾನು ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಇದ್ದೀನಿ. ನಾನು ಐಟಿ ವಿಚಾರಣೆ ಎದುರಿಸೋದಕ್ಕೆ ಆಗೊದಿಲ್ಲ. ಸಿಕ್ಕಾಪಟ್ಟೆ ಪ್ರಶ್ನೆ ಮಾಡ್ತಾರೆ. ನಾನು ಇರೋದಕ್ಕೆ ಆಗೋದಿಲ್ಲ’ಎಂದು ಹೇಳಿ ಪೋನ್‌ ಸ್ವಿಚ್‌ ಆಫ್‌ ಮಾಡಿದ್ದಾರೆಂದು ಪೊಲೀಸ್‌ ಮೂಲಗಳುತಿಳಿಸಿವೆ.

ಕಾಂಗ್ರೆಸ್‌ ಮುಖಂಡ ಜಿ.ಪರಮೇಶ್ವರ ಅವರ ಕಾಲೇಜಿನ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, ಪರಮೇಶ್ವರ ಅವರ ಆಪ್ತರಾಗಿದ್ದ ರಮೇಶ್‌ ಅವರನ್ನು ವಿಚಾರಣೆಗೊಳಪಡಿಸಿ ಬಿಟ್ಟು ಕಳುಹಿಸಿದ್ದರು. ಬಳಿಕ, ರಮೇಶ್‌ ತನ್ನ ಆಪ್ತ ಬಳಿ ಮಾತನಾಡಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದರು. ಇದಾದ ಬಳಿಕ, ರಮೇಶ್‌ ನಗರದ ಜ್ಞಾನಭಾರತಿ ಕ್ಯಾಂಪಸ್‌ ಬಳಿ ಇರುವ ಸಾಯಿ ಗ್ರೌಂಡ್‌ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಎಂಟು ವರ್ಷಗಳಿಂದ ಜಿ.ಪರಮೇಶ್ವರಅವರ ಸಹಾಯಕನಾಗಿ ರಮೇಶ್‌ಕೆಲಸ ಮಾಡುತ್ತಿದ್ದರು. ರಮೇಶ್‌ ಕೆಪಿಸಿಸಿ ಕಚೇರಿಯಲ್ಲಿ ಬೆರಳಚ್ಚುಗಾರನಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ರಮೇಶ್‌ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಪೊಲೀಶರು ಪರಿಶೀಲನೆ ನಡೆಸಿದರು.
ರಮೇಶ್‌ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಪೊಲೀಶರು ಪರಿಶೀಲನೆ ನಡೆಸಿದರು.
ಘಟನಾ ಸ್ಥಳದಲ್ಲಿ ಸೇರಿದ್ದ ಜನ
ಘಟನಾ ಸ್ಥಳದಲ್ಲಿ ಸೇರಿದ್ದ ಜನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT