ಕನ್ನಡ ನಾಡು ಶಾಂತಿಯ ತೋಟ: ಡಾ.ಜಿ.ಪರಮೇಶ್ವರ

7

ಕನ್ನಡ ನಾಡು ಶಾಂತಿಯ ತೋಟ: ಡಾ.ಜಿ.ಪರಮೇಶ್ವರ

Published:
Updated:

ತುಮಕೂರು: ಕನ್ನಡ ನಾಡು ವಿವಿಧ ಧರ್ಮ ಸಂಸ್ಕೃತಿಗಳ ಸಮಾಗಮವಾಗಿದೆ. ಧರ್ಮ ಸಹಿಷ್ಣುತೆ, ಸಮನ್ವಯತೆ, ಸೌಹಾರ್ದತೆಯಿಂದ ಬದುಕುತ್ತಿರುವ ಶಾಂತಿಯ ತೋಟ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ  ಗುರುವಾರ 63ನೇ  ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು. ಸುಂದರ, ರಮಣೀಯ ಸೌಹಾರ್ದಯುತ ಶ್ರೀಮಂತ ಶಾಂತಿಯ ನಾಡಿನಲ್ಲಿ ಜನಿಸಿರುವ ನಾವೇ ಧನ್ಯರು ಎಂದರು.

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜನರ ಸಹಕಾರದೊಂದಿಗೆ ಅಭಿವೃದ್ಧಿಯ ವೇಗವನ್ನು ಇನ್ನಷ್ಟು ಚುರುಕುಗೊಳಿಸಿ ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ತುಮಕೂರು ನಗರ ಮತ್ತು ಜಿಲ್ಲೆಯನ್ನು ನಿರ್ಮಾಣ ಮಾಡುವುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯು ಶಾಂತಿ, ಸೌಹಾರ್ದತೆಯ ನೆಲೆವೀಡು. ಸೌಹಾರ್ದತೆಯಿಂದ ಜಿಲ್ಲೆಯ ಪ್ರಗತಿಗೆ ನಮ್ಮ ಹಿರಿಯರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗುತ್ತಿರುವುದು ಜಿಲ್ಲೆಯ ಹೆಮ್ಮೆಯ ವಿಷಯವಾಗಿದೆ ಎಂದರು.

ಸಂಸದ ಎಸ್.ಪಿ. ಮುದ್ದಹನುಮೇಗೌಡ, ಶಾಸಕ ಜಿ.ಬಿ. ಜ್ಯೋತಿಗಣೇಶ ಇದ್ದರು

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !