‘ಮೈತ್ರಿ ಸರ್ಕಾರ ಸುಭದ್ರ, ಮುಂದಿನ 4 ವರ್ಷ ಕುಮಾರಸ್ವಾಮಿಯೇ ಸಿಎಂ’ –ಪರಮೇಶ್ವರ 

ಭಾನುವಾರ, ಜೂನ್ 16, 2019
28 °C

‘ಮೈತ್ರಿ ಸರ್ಕಾರ ಸುಭದ್ರ, ಮುಂದಿನ 4 ವರ್ಷ ಕುಮಾರಸ್ವಾಮಿಯೇ ಸಿಎಂ’ –ಪರಮೇಶ್ವರ 

Published:
Updated:

ಬೆಂಗಳೂರು: ‘ರಾಜ್ಯದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ’ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು. 

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೆ ಪತನವಾಗುವುದಿಲ್ಲ. ಆದರೆ ವಿಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ. ಆಪರೇಷನ್‌ ಕಮಲ ಯಶಸ್ವಿಯಾಗುವುದಿಲ್ಲ’ ಎಂದು ಹೇಳಿದರು. 

ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಜನರಿಗೆ ನಿರಾಸೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ಮುಂದಿನ ನಾಲ್ಕು ವರ್ಷ ಎಚ್‌.ಡಿ.ಕುಮಾರಸ್ವಾಮಿ ಅವರೆ ಮುಖ್ಯಮಂತ್ರಿಯಾಗಿರುತ್ತಾರೆ. ಈ ಕುರಿತು ಇಂದು ಬೆಳ್ಳಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು. 

ಇದೇ ವೇಳೆ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರೂ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. 

ಸುದ್ದಿಗೋಷ್ಠಿಗೂ ಮುನ್ನ ಸಭೆ: ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಸಚಿವರು ಹಾಗೂ ಮುಖಂಡರು ಭಾಗವಹಿಸಿದ್ದರು. 

ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಅವರು ಚರ್ಚೆ ನಡೆಸಿದರು. 

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹಿನ್ನಡೆ ಕುರಿತು ಮಾಹಿತಿ ಪಡೆದರು. ಸಭೆಯಲ್ಲಿ ಸಚಿವರು ಆಯಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಕುರಿತಾದ ಕಾರಣಗಳನ್ನು ಕೊಟ್ಟರು. ಜತೆಗೆ, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ, ವೀರಪ್ಪ ಮೊಯ್ಲಿ ಸೋಲಿನ ಬಗ್ಗೆ ಚರ್ಚೆ ನಡೆಸಲಾಗಿತು. 

ಬೆಂಗಳೂರು ಉತ್ತರದಲ್ಲಿ ಕೃಷ್ಣಬೈರೇಗೌಡಗಿಂತಲೂ ಉತ್ತಮ‌ ಅಭ್ಯರ್ಥಿಯಾರು..? ಈ ಸೋಲಿನಲ್ಲಿ ನಮ್ಮವರ ಓವರ್ ಕಾನ್ಫಿಡೆನ್ಸ್ ಕಾರಣ ಎಂದು ಸಿದ್ದರಾಮಯ್ಯ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 17

  Happy
 • 2

  Amused
 • 0

  Sad
 • 0

  Frustrated
 • 6

  Angry

Comments:

0 comments

Write the first review for this !