ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ ಮೂವರ ಬಂಧನ

Last Updated 31 ಮೇ 2019, 18:42 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ಹೊರವಲಯದಲ್ಲಿ ಯುವತಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಯುವಕರನ್ನು ಶುಕ್ರವಾರ ಬಂಧಿಸಲಾಗಿದೆ.

ಕಾರ್ತಿಕ್‌ ಕುಮಾರ್ (25), ಸೂರ್ಯಕುಮಾರ್ (23) ಹಾಗೂ ಜೀವನ್ (25) ಬಂಧಿತರು. ಇನ್ನೂ ಐವರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.‌

ನಗರದ ಹೊರವಲಯದ ಲಿಂಗಾಂಬುಧಿಪಾಳ್ಯ ಸಮೀಪದ ನಿರ್ಜನ ಪ್ರದೇಶದಲ್ಲಿ ಮೇ 8ರ ರಾತ್ರಿ ಅತ್ಯಾಚಾರ ಎಸಗಿದ್ದ ಆರೋಪಿಗಳು, ಯುವತಿಯ ಗೆಳೆಯನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಗಂಭೀರವಾಗಿ ಗಾಯಗೊಳಿಸಿದ್ದರು. ನಂತರ, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾನೆ.

ಯುವತಿಯ ಮೇಲಿನ ಹಳೆಯ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT