ಕಾಂಗ್ರೆಸ್‌ ಮುಖಂಡ ಮಹಾದೇವ ಭೈರಗೊಂಡ ಬಂಧನ

7
ಭೀಮಾ ತೀರದ ರೌಡಿ ಗಂಗಾಧರ ಚಡಚಣನ ಕೊಲೆ ಪ್ರಕರಣ

ಕಾಂಗ್ರೆಸ್‌ ಮುಖಂಡ ಮಹಾದೇವ ಭೈರಗೊಂಡ ಬಂಧನ

Published:
Updated:

ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಕಾಂಗ್ರೆಸ್‌ ಮುಖಂಡ ಮಹಾದೇವ ಭೈರಗೊಂಡನನ್ನು ಸಿಐಡಿ ಪೊಲೀಸರು ಚಡಚಣ ತಾಲ್ಲೂಕಿನ ಕೆರೂರಿನ ಆತನ ಮನೆಯಲ್ಲೇ ಗುರುವಾರ ನಸುಕಿನಲ್ಲಿ ಬಂಧಿಸಿದ್ದಾರೆ.

ಇಂಡಿ ಜೆಎಂಎಫ್‌ಸಿ ನ್ಯಾಯಾಧೀಶರು ಆರೋಪಿಯನ್ನು 7 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಗೋಪಾಲ ಹಳ್ಳೂರ ಸೇರಿ 9 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

*
ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದೆ. ತನಿಖೆ ನಡೆಸುತ್ತಿದ್ದೇವೆ. ಅಗತ್ಯ ಬಿದ್ದರೇ ಮತ್ತಷ್ಟು ಜನರನ್ನು ಬಂಧಿಸಲಾಗುವುದು.
–ಎಚ್‌.ಡಿ.ಆನಂದಕುಮಾರ್‌, ಸಿಐಡಿ ಎಸ್‌ಪಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !