ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಗತ ಪಾತಕಿ ರವಿ ಪೂಜಾರಿ ರಾಜ್ಯ ಪೊಲೀಸರ ಕಸ್ಟಡಿಗೆ

Last Updated 24 ಫೆಬ್ರುವರಿ 2020, 2:29 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತಬಪಾತಕಿರವಿ ಪೂಜಾರಿಯನ್ನು ರಾಜ್ಯದ ಹಿರಿಯ ಪೊಲೀಸ್ಅಧಿಕಾರಿಗಳ ತಂಡಸೋಮವಾರ ನಸುಕಿನಲ್ಲಿ ನಗರಕ್ಕೆ ಕರೆದುಕೊಂಡು ಬಂದಿದೆ.

ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ತಂಡ ಪೂಜಾರಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂದೀಪ್ ಪಾಟೀಲ, ರವಿ ಪೂಜಾರಿ ಅಪರಾಧ ಚಟುವಟಿಕೆ, ನಗರಕ್ಕೆ ಕರೆದುಕೊಂಡ ಬಂದಿರುವ ಹಿನ್ನೆಲೆ ಬಗ್ಗೆ ಸೋಮವಾರ ಬೆಳಿಗ್ಗೆ ಹೆಚ್ಚಿನ‌ ಮಾಹಿತಿ ನೀಡಲಾಗುವುದು ಎಂದರು.

ರಾಜ್ಯದಲ್ಲಿ 6೦ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ ರವಿಪೂಜಾರಿ 1990ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.

ಭೂಗತ ಪಾತಕಿ ರವಿಪೂಜಾರಿ ಭಾರತದಲ್ಲಿ ಪರೋಕ್ಷವಾಗಿ ಅಪರಾಧ ಕೃತ್ಯ ನಡೆಸಿ ವಿದೇಶದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಪ್ರಕರಣಗಳು ಪೂಜಾರಿ ವಿರುದ್ದ ದಾಖಲಾಗಿತ್ತು. ಮಂಗಳೂರು ನಗರ, ಮುಲ್ಕಿ, ಮೂಡಬಿದರೆ, ಬರ್ಕೆ, ಕೋಣಾಚೆ, ಊರ್ವ, ಕಾವೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 33ಕ್ಕೂ‌ ಹೆಚ್ಚು ಪ್ರಕರಣಗಳಿವೆ.

ರವಿ ಪೂಜಾರಿಯನ್ನು ಭಾರತಕ್ಕೆ ಕರೆತರಲು ಸುಮಾರು ಒಂದು ವರ್ಷದಿಂದ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೇಂದ್ರದ‌ ತನಿಖಾ ಸಂಸ್ಥೆಗಳು ನಿರಂತರ ಪ್ರಯತ್ನ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT