ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರ್ವಾಸನೆಗೆ ತತ್ತರಿಸಿದ ಬದುಕು: ಅವೈಜ್ಞಾನಿಕ ಕಸ ವಿಲೇವಾರಿಗೆ ಆಕ್ರೋಶ

ಬೆಳ್ಳಹಳ್ಳಿ ಗ್ರಾಮಸ್ಥರು, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ:
Last Updated 22 ಜೂನ್ 2019, 19:40 IST
ಅಕ್ಷರ ಗಾತ್ರ

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬೆಳ್ಳಹಳ್ಳಿ ಸಮೀಪದ ಬಂಡೆ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿರುವ ಬಿಬಿಎಂಪಿ ಕ್ರಮವನ್ನು ಖಂಡಿಸಿ, ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತಮಾಡಿದ ಶಾಸಕ ಎಸ್.ಆರ್.ವಿಶ್ವನಾಥ್, ‘ಬೆಳ್ಳಹಳ್ಳಿ ಮತ್ತು ಮಿಟ್ಟಗಾನಹಳ್ಳಿ ಗ್ರಾಮಗಳ ಬಂಡೆಪ್ರದೇಶಗಳಲ್ಲಿ ಬಿಬಿಎಂಪಿ ವೈಜ್ಞಾನಿಕ ಕ್ರಮ ಅನುಸರಿಸದೆ ಕಸ ವಿಲೇವಾರಿ ಮಾಡುತ್ತಿರುವುದರಿಂದ ಸುತ್ತಮುತ್ತ ಗ್ರಾಮಗಳಲ್ಲಿ ದುರ್ವಾಸನೆ ಹರಡಿಕೊಂಡು ಜನರು ಉಸಿರುಗಟ್ಟುವ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅಲ್ಲದೆ ಹಲವಾರು ಮಂದಿ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ’ ಎಂದು ದೂರಿದರು.

‘ಈಗಾಗಲೇ ಲಕ್ಷಾಂತರ ಟನ್ ಕಸ ವಿಲೇವಾರಿ ಮಾಡಿರುವುದರಿಂದ ಈ ಭಾಗದ ಕೆರೆಗಳ ನೀರು ಕಲುಷಿತಗೊಂಡು ಕೊಳವೆಬಾವಿಗಳಲ್ಲಿ ಕೊಳಚೆನೀರು ಹೊರಬರುತ್ತಿದೆ. ಕಸ ವಿಲೇವಾರಿ ಮಾಡುತ್ತಿರುವ ಜಾಗದ ಸಮೀಪದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ-ಕಾಲೇಜುಗಳೂ ಸೇರಿದಂತೆ ಹಲವಾರು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ನೌಕರರ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಬಿಬಿಎಂಪಿ ಕೂಡಲೇ ಕಸವಿಲೇವಾರಿ ಮಾಡುವುದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಮಾತನಾಡಿ, ‘ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಜನರ ಬಗ್ಗೆ ನಿಜವಾದ ಕಾಳಜಿಯಿದ್ದರೆ ಬೆಳ್ಳಹಳ್ಳಿ ಮತ್ತು ಮಿಟ್ಟಗಾನಹಳ್ಳಿ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ಹೂಡಲಿ; ತಮ್ಮೊಂದಿಗೆ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಕೃಷ್ಣಬೈರೇಗೌಡರನ್ನು ಕರೆತರಲಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT