ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಗಾರ್ಮೆಂಟ್ಸ್‌ ನೌಕರರಿಂದ ಪ್ರತಿಭಟನೆ, ಲಾಠಿ ಚಾರ್ಚ್‌ -ಹಲವರಿಗೆ ಗಾಯ  

Last Updated 24 ಜುಲೈ 2019, 7:50 IST
ಅಕ್ಷರ ಗಾತ್ರ

ಹಾಸನ: ನಗರದ ಕೈಗಾರಿಕಾ ವಲಯದಲ್ಲಿರುವ ಹಿಮ್ಮತ್ ಸಿಂಗ್ ಗಾರ್ಮೆಂಟ್ಸ್‌ ಬಳಿ ಬುಧವಾರ ಕಾರ್ಮಿಕರ ದಿಢೀರ್ ಪ್ರತಿಭಟನೆ ನಡೆಸಿದರು.

ವಿನಾಕಾರಣ ಕಾರ್ಮಿಕರ ಮೇಲೆ ಹಲ್ಲೆ ಮತ್ತು ದೌರ್ಜನ್ಯ ನಡೆಸುತ್ತಿರುವುದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು.

ಗಾರ್ಮೆಂಟ್ಸ್‌ನಲ್ಲಿ ನಾಲ್ಕು ಸಾವಿರಕ್ಕಿಂತ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಆಡಳಿತ ಮಂಡಳಿಯವರು ಕಾರ್ಮಿಕ ಕಾಯ್ದೆ ಉಲ್ಲಂಘಿಸಿ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಜತೆಗೆ, ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕೆ ಬಂದಿರುವ‌ ಕಾರ್ಮಿಕರ ಮೇಲೆ ಇತ್ತೀಚೆಗೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರೊಚ್ಚಿಗೆದ್ದ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಪೊಲೀಸ್‌ ವಾಹನಗಳು ಸೇರಿದಂತೆ ಹಲವು ವಾಹನಗಳ ಮೇಲೆಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಘಟನೆಯಲ್ಲಿ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT