ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ಯಾಂಕರ್‌ ಮಗುಚಿ ಗ್ಯಾಸ್ ಸೋರಿಕೆ

Last Updated 2 ಡಿಸೆಂಬರ್ 2018, 16:50 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಶನಿವಾರ ತಡರಾತ್ರಿ ಬುಲೆಟ್ ಟ್ಯಾಂಕರ್ ರಸ್ತೆಗೆ ಮಗುಚಿ ಬಿದ್ದು, ಅನಿಲ ಸೋರಿಕೆ ಉಂಟಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಭಾನುವಾರ ಮಧ್ಯಾಹ್ನದ ವರೆಗೂ ಸಂಚಾರ ವ್ಯತ್ಯಯ ಉಂಟಾಯಿತು.

ರಾತ್ರಿ 11 ಗಂಟೆಯ ಹೊತ್ತಿಗೆ ಮಂಗಳೂರಿನಿಂದ ಬೆಂಗಳೂರಿನತ್ತ ಅಡುಗೆ ಅನಿಲವನ್ನು ಒಯ್ಯುತ್ತಿದ್ದ ಬುಲೆಟ್ ಟ್ಯಾಂಕರ್ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಗೆ ಮಗುಚಿ ಬಿದ್ದಿದೆ. ದೊಡ್ಡ ಪ್ರಮಾಣದಲ್ಲಿ ಅನಿಲ ಸೋರಿಕೆ ಉಂಟಾಗಿ ಭಯದ ವಾತಾವರಣ ನಿರ್ಮಾಣವಾಗಿತ್ತು.

ಟ್ಯಾಂಕರ್ ಚಾಲಕ ಬೆಂಗಳೂರಿನ ಪುಷ್ಪರಾಜ ಸಣ್ಣಪುಟ್ಟ ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ.

ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗುತ್ತಿದ್ದಂತೆ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆ ಹಿಡಿಯಲಾಯಿತು. ಸುಮಾರು 15 ತಾಸು ಈ ರಸ್ತೆಯಲ್ಲಿ ವಾಹನ ಸಂಚಾರ ತಡೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT