ಭಾನುವಾರ, ಮಾರ್ಚ್ 7, 2021
22 °C

ಗೌರಿ ಹತ್ಯೆ: ಎಸ್‌ಐಟಿ ವಶಕ್ಕೆ ಸುಧನ್ವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಧನ್ವ ಗೊಂಧಾಳೇಕರ್‌ನನ್ನು ಎಸ್‌ಐಟಿ ಪೊಲೀಸರ ವಶಕ್ಕೆ ನೀಡಿ ಪುಣೆ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

2017ರ ಸೆ.5ರ ಮಧ್ಯಾಹ್ನ ಗೌರಿ ಅವರ ಮನೆ ಬಳಿ ಸುಧನ್ವ ಸಹಚರನೊಂದಿಗೆ ಓಡಾಡಿದ್ದ. ಆ ದೃಶ್ಯ ‘ಸನ್ ರೈಸ್ ರೆಸಿಡೆನ್ಸಿ’ ಅಪಾರ್ಟ್‌ಮೆಂಟ್ ಸಮುಚ್ಚಯದ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ಸಾಕ್ಷ್ಯವನ್ನು ಪುಣೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಎಸ್‌ಐಟಿ, ಹೆಚ್ಚಿನ ವಿಚಾರಣೆಗಾಗಿ ಆತನನ್ನು ಕಸ್ಟಡಿಗೆ ನೀಡುವಂತೆ ಕೋರಿತ್ತು. ಆ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

‘ಪುಣೆಯಲ್ಲಿರುವ ನಮ್ಮ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದು, ಶನಿವಾರ ನಗರಕ್ಕೆ ಕರೆತರಲಿದ್ದಾರೆ’ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು