ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಯರ್‌ ಆಗಿ ಆಯ್ಕೆಯಾದ ಗೌತಮ್‌ ಕುಮಾರ್‌ ಯಾರು? ಹಿನ್ನೆಲೆ ಏನು?

Last Updated 1 ಅಕ್ಟೋಬರ್ 2019, 8:55 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 53ನೇ ಮೇಯರ್‌ ಆಗಿ ಬಿಜೆಪಿಯ ಕಾರ್ಪೊರೇಟರ್‌ ಗೌತಮ್‌ ಕುಮಾರ್‌ ಜೈನ್‌ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಶಾಂತಿನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಜೋಗುಪಾಳ್ಯ ವಾರ್ಡ್‌–89 ಸದಸ್ಯರಾಗಿರುವ ಗೌತಮ್‌, ಅಲ್ಲಿಂದ ಈ ವರೆಗೆ ಎರಡು ಬಾರಿ ಆಯ್ಕೆಯಾಗಿದ್ದಾರೆ.

ಗೌತಮ್ ಕುಮಾರ್ ಬಿ.ಕಾಂ ಪದವೀಧರ. ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಯಾಗಿ ಅವರು ಈ ವರೆಗೆ ಕಾರ್ಯನಿರ್ವಹಿಸಿದ್ದರು. ಶಾಂತಿನಗರದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯದರ್ಶಿಯಾಗಿ, ರಾಜ್ಯ ಯುವ ಮೋರ್ಚಾದ ಖಜಾಂಚಿಯಾಗಿಯೂ ಕೆಲಸ ಮಾಡಿದ್ದಾರೆ.

ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಗೌತಮ್ ಜೈನ್, 2013-14ರಲ್ಲಿ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಅವರ ಆಯ್ಕೆಯಲ್ಲಿ ಆರ್‌ಎಸ್‌ಎಸ್‌ ಪ್ರಮುಖ ಪಾತ್ರ ವಹಿಸಿದೆ.ಬಿಜೆಪಿಯಿಂದ ಒಟ್ಟು ಏಳು ಮಂದಿ ಮೇಯರ್‌ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಬಿಜೆಪಿ ವರಿಷ್ಠರು ಸಂಘ ಪರಿವಾರದ ಹಿನ್ನೆಲೆಯ ಗೌತಮ್ ಅವರನ್ನು ಪಕ್ಷದಿಂದ ಕಣಕ್ಕಿಳಿಸಿದ್ದರು.

ಇನ್ನಷ್ಟು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT