ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆ ಮುಗಿಯುವ ಮುನ್ನವೇ ನೇಮಕಾತಿ ಆದೇಶ

Last Updated 21 ಮೇ 2020, 21:36 IST
ಅಕ್ಷರ ಗಾತ್ರ

ಬೆಂಗಳೂರು: 2015ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಡಿಜಿಟಲ್‌ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಹೈಕೋರ್ಟ್‌ನಲ್ಲಿದೆ. ಅದು ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ನೇಮಕಾತಿ ಆದೇಶ ನೀಡಿರುವುದು ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಡಿಜಿಟಲ್‌ ಮೌಲ್ಯಮಾಪನ ವೇಳೆ ಅಕ್ರಮ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ಲೋಕಸೇವಾ ಆಯೋಗದ (ಕೆ‍ಪಿಎಸ್‌ಸಿ) ವಿರುದ್ಧ 10ಕ್ಕೂ ಹೆಚ್ಚು ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಬೇಕು ಮತ್ತು ಮರು ಮೌಲ್ಯಮಾಪನಕ್ಕೆ ಆದೇಶ ನೀಡಬೇಕು ಎಂದೂ ನೊಂದ ಅಭ್ಯರ್ಥಿಗಳು ಮನವಿ ಮಾಡಿದ್ದರು. ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಹೈಕೋರ್ಟ್‌, ಕೆಪಿಎಸ್‌ಸಿ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್‌ ಕೂಡಾ ಜಾರಿ ಮಾಡಿತ್ತು.

ಈ ಮಧ್ಯೆ, ಲಾಕ್‌ಡೌನ್‌ ಘೋಷಣೆಯಾಗಿದೆ. ಅರ್ಹ ಅಭ್ಯರ್ಥಿಗಳನ್ನು ದೂರವಿಡುವ ಉದ್ದೇಶದಿಂದಲೇ ಲಾಕ್‌ಡೌನ್ ಜಾರಿಯಲ್ಲಿರುವ ಮಧ್ಯದಲ್ಲಿ ತರಾತುರಿಯಲ್ಲಿ ನೇಮಕಾತಿ ಆದೇಶ ನೀಡಲಾಗುತ್ತಿದೆ ಎಂದು ಅರ್ಜಿದಾರರು ದೂರಿದ್ದಾರೆ.

ಹೈಕೋರ್ಟ್‌ನಲ್ಲಿ ವಿಚಾರಣೆ ಕೊನೆಗೊಳ್ಳುವವರೆಗೂ ನೇಮಕಾತಿ ಆದೇಶ ತಡೆ ಹಿಡಿಯಬೇಕು ಎಂದೂ ಅರ್ಜಿದಾರರು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಲಭ್ಯರಾಗಲಿಲ್ಲ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT