ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

7

ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Published:
Updated:

ನಂಜನಗೂಡು: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿವಾಹಿತ ಪುರುಷನೊಬ್ಬ, ಬಾಲಕಿಯನ್ನು 7 ದಿನಗಳ ಹಿಂದೆ ಅಪಹರಿಸಿ, ಬೇರೆ ಊರುಗಳಲ್ಲಿ ಸುತ್ತಾಡಿಸಿ ಗ್ರಾಮದ ತನ್ನ ಅಂಗಡಿ ಕಟ್ಟಡದಲ್ಲಿ ಬಂಧನದಲ್ಲಿರಿಸಿಕೊಂಡಿದ್ದನು. ಶುಕ್ರವಾರ ರಾತ್ರಿ ಬಾಲಕಿಯು ತನ್ನ ಮೊಬೈಲ್‌ ಫೋನಿನಿಂದ ತಂದೆಯನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾಳೆ. ಬಾಲಕಿಯ ತಂದೆ ಪೊಲೀಸರಿಗೆ ವಿಷಯ ತಿಳಿಸಿದ್ದು, ನಂತರ ರಕ್ಷಿಸಲಾಗಿದೆ.

‘ನನ್ನನ್ನು ಅಪಹರಿಸಿ ಬಲವಂತವಾಗಿ ವಿವಾಹವಾಗಿದ್ದಾರೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ’ ಎಂದು ವಿಚಾರಣೆ ವೇಳೆ ಬಾಲಕಿ ತಿಳಿಸಿದ್ದಾಳೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !