ಗುರುವಾರ , ನವೆಂಬರ್ 21, 2019
22 °C

‘ರಿಜ್ವಾನ್‌ಗೆ ಟಿಕೆಟ್ ಕೊಡಬೇಡಿ’

Published:
Updated:

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಉಪಚುನಾವಣೆಯಲ್ಲಿ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡದಂತೆ ಈ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಟಿಕೆಟ್ ನೀಡದಂತೆ ಮನವಿ ಮಾಡಿದ್ದಾರೆ. ರಿಜ್ವಾನ್ ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆ. ಈಗಾಗಲೇ ವಿಧಾನಪರಿಷತ್ ಸದಸ್ಯರಾಗಿದ್ದು, ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದು, ಈಗ ವಿಧಾನಸಭೆಗೆ ಟಿಕೆಟ್ ನೀಡುವ ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.

ರಿಜ್ವಾನ್‌ಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂದು ಮನವಿಮಾಡಿದ್ದಾರೆ. ರಿಜ್ವಾನ್‌ಗೆ ಟಿಕೆಟ್ ನೀಡುವುದಕ್ಕೆ ಹಿರಿಯ ಮುಖಂಡರೂ ಸಹ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಪ್ರತಿಕ್ರಿಯಿಸಿ (+)