ಭಾನುವಾರ, ಮೇ 16, 2021
24 °C

‘ಗೋವಾ ಸಿ.ಎಂ. ದ್ವಂದ್ವ ನಿಲುವು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ದ್ವಂದ್ವ
ನಿಲುವು ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಕಾಂಗ್ರೆಸ್‌ ಟೀಕಿಸಿದೆ.

‘ಈ ವಿವಾದವನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿಮುಖ್ಯಮಂತ್ರಿ ತಿಳಿಸಿದ್ದಾರೆ. ಹಾಗಾದರೆ, ‘ಸೌಹಾರ್ದ ಇತ್ಯರ್ಥ’ ಏನು ಎನ್ನುವುದನ್ನು ಜನರಿಗೆ ವಿವರಿಸಬೇಕು’ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಗಿರೀಶ್‌ ಚೋಡಂಕರ್‌ ಆಗ್ರಹಿಸಿದ್ದಾರೆ.

‘ಕರ್ನಾಟಕದಲ್ಲಿ ಉಪಚುನಾವಣೆ ನಡೆಯುತ್ತಿರುವುದರಿಂದ ಗೋವಾ, ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳು ಮತದಾರರಿಗೆ ಸುಳ್ಳುಗಳನ್ನು ಹೇಳಿ ವಂಚಿಸುತ್ತಿವೆ’ ಎಂದು ಟೀಕಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು