ಬುಧವಾರ, ಜನವರಿ 29, 2020
27 °C

ಮಂಗಳೂರು: ಅಕ್ರಮ ಸಾಗಾಟ, ₹ 63 ಲಕ್ಷ ಮೌಲ್ಯದ ಚಿನ್ನ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇಲ್ಲಿನ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದೇ 6 ರಂದು ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಪ್ರಯಾಣಿಕನೊಬ್ಬ ಅಕ್ರಮವಾಗಿ ಸಾಕ್ಸ್‌ನಲ್ಲಿ ಅಡಗಿಸಿಟ್ಟು ತಂದಿದ್ದ 336.7 ಗ್ರಾಂ ಚಿನ್ನದ ಮೌಲ್ಯ ₹13.43 ಲಕ್ಷ ಎಂದು ಅಂದಾಜಿಸಲಾಗಿದೆ.

7 ರಂದು ದುಬೈನಿಂದ ಬಂದಿದ್ದ ಏರ್ ಇಂಡಿಯಾ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರಿಂದ ಅಕ್ರಮ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಒಬ್ಬ ಪ್ರಯಾಣಿಕನಿಂದ ಪೇಸ್ಟ್ ರೂಪದಲ್ಲಿದ್ದ ₹21.24 ಲಕ್ಷ ಮೌಲ್ಯದ 523 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದು, ಮತ್ತೊಬ್ಬನಿಂದ ಸುಮಾರು ₹29.06 ಲಕ್ಷ ಮೌಲ್ಯದ 716 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಮೂರು ಪ್ರಕರಣಗಳು ಸೇರಿದಂತೆ ಒಟ್ಟು ₹63.73 ಲಕ್ಷ ಮೌಲ್ಯದ 1 ಕೆ.ಜಿ. 575 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು