ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸೇನಾನಿಗಳಿಗೆ ಉತ್ತಮ ಚಿಕಿತ್ಸೆ: ಬಿ.ಎಸ್‌.ಯಡಿಯೂರಪ್ಪ

Last Updated 23 ಜೂನ್ 2020, 18:30 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ನಿರ್ವಹಣೆಯಲ್ಲಿ ತೊಡಗಿರುವ ಸರ್ಕಾರಿ ಸಿಬ್ಬಂದಿ(ಸೇನಾನಿಗಳು) ಸೋಂಕಿಗೆ ಒಳಗಾದರೆ ಪರೀಕ್ಷೆ ಮತ್ತು ಚಿಕಿತ್ಸೆಗೆ ಅತ್ಯುತ್ತಮ ವ್ಯವಸ್ಥೆ ಮಾಡಲಾಗಿದ್ದು, ಯಾರೂ ಗಾಬರಿಗೆ ಒಳಗಾಗಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಕೆಎಸ್‌ಆರ್‌ಪಿಯ ಕಾನ್‌ಸ್ಟೇಬಲ್‌ವೊಬ್ಬರು ಕೋವಿಡ್‌ ಸೋಂಕಿನಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ, ಅವರ ಆತ್ಮಹತ್ಯೆ ದುಃಖಕರ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಪೊಲೀಸ್‌ ಸಿಬ್ಬಂದಿಗಾಗಿಯೇ ಪ್ರತ್ಯೇಕ ಕೋವಿಡ್‌ ಪರೀಕ್ಷಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT