ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ರಾಜಕೀಯ | ರಾಜ್ಯಪಾಲರ ಮಧ್ಯಪ್ರವೇಶ: ಬಿಜೆಪಿ ನಿರ್ಧಾರ

Last Updated 9 ಜುಲೈ 2019, 19:39 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕರ ಸರಣಿ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಇಳಿದಿದ್ದು, ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ನಿರ್ಮಾಣವಾಗಿದೆ. ಆದ್ದರಿಂದ, ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಮಾಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ಈ ಸಂಬಂಧ ಬುಧವಾರ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ರಾಜೀನಾಮೆ ಪ್ರಕರಣದಿಂದ ರಾಜಕೀಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌ ಅವರನ್ನು ಭೇಟಿ ಮಾಡಿ ಶಾಸಕರ ರಾಜೀನಾಮೆಯನ್ನು ಪರಿಶೀಲಿಸಿ ಅಂಗೀಕರಿಸಬೇಕು ಎಂದು ಒತ್ತಾಯಿಸಲು ಪಕ್ಷದಲ್ಲಿ ನಿರ್ಧರಿಸಲಾಗಿದೆ.

ಇದಕ್ಕೆ ಮುನ್ನ ಬುಧವಾರ ಬೆಳಿಗ್ಗೆ ವಿಧಾನಸೌಧ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಲಾಗುವುದು ಎಂದೂ ಅವರು ಹೇಳಿದರು.

ನಾಳೆಯೂ (ಬುಧವಾರ) ಕೆಲವರು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಆದ್ದರಿಂದ ಬೆಳವಣಿಗೆಯನ್ನು ನೋಡಿ ಸಂಜೆ ಪುನಃ ಶಾಸಕಾಂಗ ಸಭೆ ಸೇರಲಾಗುವುದು ಎಂದು ಅರವಿಂದ್‌ ಮಾಧ್ಯಮದವರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT