ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಸಚಿವ ರೇವಣ್ಣ

ಬೆಂಗಳೂರು: ಸರ್ಕಾರದ ಆಡಳಿತದಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸಚಿವ ಎಚ್.ಡಿ.ರೇವಣ್ಣ ಬುಧವಾರ ತಿಳಿಸಿದರು.
ಬೆಂಗಳೂರು ಶಾಸಕರ ಆಡಳಿತದಲ್ಲೂ ಯಾವುದೇ ಹಸ್ತಕ್ಷೇಪ ಮಾಡಿಲ್ಲ, ಕ್ಷೇತ್ರಗಳ ಅನುದಾನ ವಿಚಾರದಲ್ಲೂ ತಾರತಮ್ಯ ಮಾಡಿಲ್ಲ, ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು. ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ನಾನು ಮೂಗು ತೂರಿಸಿಲ್ಲ, ನನ್ನ ಇಲಾಖೆ ಬಿಟ್ಟು ಬೇರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ರೇವಣ್ಣ ತಿಳಿಸಿದರು.
ರೇವಣ್ಣ ಅವರು ನಿಂಬೆ ಹಣ್ಣು ಇಟ್ಟುಕೊಂಡಿರುತ್ತಾರೆ ಎಂಬ ಪ್ರಶ್ನೆಗೆ ‘ನಾನು ಯಾವುದೇ ನಿಂಬೆ ಹಣ್ಣು ಇಟ್ಟುಕೊಂಡಿಲ್ಲ‘ ಎಂದು ಸ್ಪಷ್ಟಪಡಿಸಿದರು. ಅತೃಪ್ತ ಶಾಸಕರು ಮುಂಬೈಗೆ ಹೋದ ಮೇಲೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ, ಅವರು ಇಲ್ಲೆ ಇದ್ದಾಗ ಯಾಕೆ ಹೇಳಲಿಲ್ಲ, ಇವರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕಿದೆ ಎಂದು ರೇವಣ್ಣ ಹೇಳಿದರು.
ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಅವರಿಗೆ ನಾವು ಕೆಟ್ಟದನ್ನು ಮಾಡಿಲ್ಲ, ಅವರ ಕುಟುಂಬಕ್ಕೆ ದೇವರು ಒಳ್ಳೆಯದು ಮಾಡಲಿ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.