ಶನಿವಾರ, ಆಗಸ್ಟ್ 15, 2020
27 °C

ಕೊರೊನಾ ಜಾಗೃತಿ ಫಲಕಕ್ಕೆ ಅನುಮತಿ ಕೋರಿ ಹೈಕೋರ್ಟ್‌ಗೆ ಸರ್ಕಾರದ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದ ಪ್ರಮುಖ ಪ್ರದೇಶಗಳಲ್ಲಿ ಜಾಹೀರಾತು ಪಲಕ (ಹೋರ್ಡಿಂಗ್ಸ್) ಅಳವಡಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ‌ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ‌ ಸಲ್ಲಿಸಿದೆ.

ಈ ಕುರಿತು ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಶುಕ್ರವಾರ ವಿಚಾರಣೆ ನಡೆಸಿತು.

'ಜಾಹೀರಾತು ಫಲಕಗಳಿಗೆ ಯಾವ ಬಗೆಯ ಪರಿಕರ ಬಳಸಲಾಗುತ್ತದೆ, ಯಾವ್ಯಾವ ಜಾಗದಲ್ಲಿ ಎಷ್ಟು ಅಳತೆ ಹೋರ್ಡಿಂಗ್ಸ್ ಅಳವಡಿಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿ' ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದ ನ್ಯಾಯಪೀಠ ಇದೇ 14ಕ್ಕೆ ವಿಚಾರಣೆ ಮುಂದೂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು