ಸೋಮವಾರ, ಏಪ್ರಿಲ್ 19, 2021
25 °C

ಯಾವುದೇ ಕ್ಷಣ ಸರ್ಕಾರ ಪತನ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ‘ರಾಜ್ಯ ಸರ್ಕಾರ ಕಚ್ಚಾಟ, ಬಡಿದಾಟದಲ್ಲಿ ತಲ್ಲೀನವಾಗಿದೆ. ಯಾವುದೇ ಕ್ಷಣದಲ್ಲೂ ಸರ್ಕಾರ ಬೀಳಬಹುದು. ಸುಮ್ಮನೆ ಕೂರಲು ನಾವೇನು ಸನ್ಯಾಸಿಗಳಲ್ಲ. ಪಕ್ಷದ ಕಾರ್ಯಕರ್ತರು ಜಾಗೃತರಾಗಿರಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಬಿಜೆಪಿಯ ಶನಿವಾರ ಹಮ್ಮಿಕೊಂಡಿದ್ದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಯಡಿಯೂರಪ್ಪ ಅವರು ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ಪುನರುಚ್ಚರಿಸಿದರು.

‘ರಾಜ್ಯದ 171 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುಂದಿದೆ. ಈಗ ಚುನಾವಣೆ ನಡೆದರೆ 150ರಿಂದ 160 ಸ್ಥಾನಗಳನ್ನು ಪಕ್ಷ ಗೆಲ್ಲಲಿದೆ. ಕಾಂಗ್ರೆಸ್ ಕಚ್ಚಾಟದಲ್ಲಿ ಮುಳುಗಿದೆ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ಭೀಕರ ಬರಗಾಲವಿದೆ. ಬರ ಅಧ್ಯಯನಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದೇವೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು