ಸೋಮವಾರ, ಅಕ್ಟೋಬರ್ 21, 2019
22 °C

ಮಳೆಯಿಂದ ಹಾನಿಯಾದ ಮನೆಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ

Published:
Updated:

ಬೆಂಗಳೂರು: ಮಳೆ ಮತ್ತು ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರ ಗುರುವಾರ ಪರಿಹಾರ ಘೋಷಿಸಿದೆ.

ವಿಧಾನ ಪರಿಷತ್‌ನಲ್ಲಿ ಈ ಕುರಿತು ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಕಂದಾಯ ಸಚಿವ ಆರ್‌.ಅಶೋಕ್, ಶೇ 25ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದರೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

ಶೇ 15ರಿಂದ 25ರಷ್ಟು ಹಾನಿಯಾಗಿದ್ದರೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಕಟಿಸಿದರು.

ಮಳೆ ಮತ್ತು ನೆರೆಯಿಂದಾಗಿ ಶೇ 25ರಿಂದ ಶೇ 75ರಷ್ಟು ಪ್ರಮಾಣದಲ್ಲಿ ಮನೆಗಳು ಹಾಳಾಗಿದ್ದರೆ ₹1 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಈ ಹಿಂದೆ ತಿಳಿಸಿತ್ತು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)