‘ದಿವಾಳಿಯಾಗುತ್ತಿರುವ ಸರ್ಕಾರ’

7

‘ದಿವಾಳಿಯಾಗುತ್ತಿರುವ ಸರ್ಕಾರ’

Published:
Updated:

ನಂಜನಗೂಡು: ‘ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿನ ಕೃಷಿ ಸಾಲಮನ್ನಾ ಘೋಷಣೆ ಮಾಡಲಾಗಿದೆ. ಹಣ ಹೊಂದಿಸಲು ವಿಫಲವಾಗಿರುವ ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಲ್ಲಿ ಸೋಮವಾರ ಆರೋಪಿಸಿದರು.

ಬಿಜೆಪಿ ವತಿಯಿಂದ ನಡೆದ ಮತದಾರರಿಗೆ ಕೃತಜ್ಞತೆ ಹಾಗೂ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ನಂಜನಗೂಡು ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿದ್ದ ಸಿದ್ದರಾಮಯ್ಯ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮತದಾರರು 36 ಸಾವಿರ ಮತಗಳ ಅಂತರದಿಂದ ಹೀನಾಯವಾಗಿ ಸೋಲಿಸಿದ್ದಾರೆ. ಅವರು ಕೊಟ್ಟ ಏಟಿಗೆ 15 ದಿನ ಪ್ರಕೃತಿ ಚಿಕಿತ್ಸೆಗೆ ತೆರಳಬೇಕಾಯಿತು’ ಎಂದು ರಾಜ್ಯ ಘಟಕದ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ವ್ಯಂಗ್ಯವಾಡಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !