ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಋಣಭಾರ ಪೀಡಿತರಿಗೆ ಲೇವಾದೇವಿದಾರರ ಕಿರುಕುಳ ತಡೆಯಲು ಸರ್ಕಾರ ಸೂಚನೆ 

Last Updated 30 ಆಗಸ್ಟ್ 2018, 4:10 IST
ಅಕ್ಷರ ಗಾತ್ರ

ಬೆಂಗಳೂರು:ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಕ್ರಮ ವಹಿಸಲು ಎಲ್ಲ ಪ್ರಾದೇಶಿಕ ಆಯುಕ್ತರು, ವಲಯಗಳ ಪೊಲೀಸ್ ಮಹಾನಿರೀಕ್ಷಕರು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

‘ಕರ್ನಾಟಕ ಋಣಭಾರ ಪರಿಹಾರ ಮಸೂದೆ 2018ನ್ನು ರಾಜ್ಯದಲ್ಲಿನ ಋಣಭಾರ ಪೀಡಿತ ಸಣ್ಣರೈತರಿಗೆ ಭೂರಹಿತ ರೈತ ಕೃಷಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗದ ಜನರಿಗೆ ಋಣಭಾರದ ಸಮಸ್ಯೆಗಳ ಪರಿಹಾರಕ್ಕಾಗಿ ಮಂಡಿಸಲು ಪರಿಶೀಲಿಸಲಾಗುತ್ತಿದೆ. ಈ ಮಾಹಿತಿಯು ರಾಜ್ಯದ ಹಲವಾರು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಋಣಭಾರ ಪೀಡಿತ ಸಣ್ಣರೈತರಿಗೆ ಭೂರಹಿತ ರೈತ ಕೃಷಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗದ ಜನರಿಗೆ ಸಾಲ ನೀಡಿದರೆನ್ನಲಾದ ಲೇವಾದೇವಿಗಾರರಿಂದ ಸಾಲ ಪಡೆದವರ ಮೇಲೆ ವಿವಿಧ ರೀತಿಯ ಕಾನೂನುಬಾಹಿರ ಒತ್ತಡಗಳು ವರದಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಈ ಸಾಲ ಪಡೆದವರ ಮೇಲೆ ಯಾವುದೇ ರೀತಿಯ ಕಾನೂನುಬಾಹಿರ ಒತ್ತಡ ಹಾಕದಂತೆ/ದೌರ್ಜನ್ಯ ಎಸಗದಂತೆ ತಡೆಗಟ್ಟಲು ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸುವಂತೆ ಈ ಮೂಲಕ ಸೂಚಿಸಲಾಗಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT