ಗುರುವಾರ , ಸೆಪ್ಟೆಂಬರ್ 19, 2019
29 °C

ಔಷಧ ಖರೀದಿಗೆ ಅನುದಾನ

Published:
Updated:

ಬೆಂಗಳೂರು: ರಾಜ್ಯದಲ್ಲಿ ಕೊರತೆ ಇರುವ ಕೆಲವು ಬಗೆಯ ಔಷಧಗಳ ಖರೀದಿಗಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಎಲ್ಲ ಆರೋಗ್ಯ ಸಂಸ್ಥೆಗಳಿಗೂ ಅನುದಾನ ಬಿಡುಗಡೆಗೊಳಿಸಲಾಗಿದೆ.

ಪ್ರತಿ ಜಿಲ್ಲಾ ಆಸ್ಪತ್ರೆ, ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಗಳಿಗೆ ತಲಾ ₹25 ಲಕ್ಷ, ತಾಲ್ಲೂಕು ಆಸ್ಪತ್ರೆಗಳಿಗೆ ತಲಾ ₹10 ಲಕ್ಷ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ತಲಾ ₹3 ಲಕ್ಷ, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ₹50 ಸಾವಿರಗಳನ್ನು ಬಿಡುಗಡೆ ಮಾಡಲಾಗಿದೆ.

ಔಷಧ ಖರೀದಿಸುವುದಕ್ಕೆ ಮುನ್ನ ರಾಷ್ಟ್ರೀಯ ಆರೋಗ್ಯ ಅಭಿಯಾನ ಮಾರ್ಗಸೂಚಿ ಅನುಸರಿಸಬೇಕು.

 

Post Comments (+)