ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದಿರುವುದರಿಂದ ಸರ್ಕಾರ ಅಸ್ಥಿರವಾಗಲ್ಲ: ಪರಮೇಶ್ವರ್

ಬೆಂಗಳೂರು: ಪಕ್ಷೇತರ ಶಾಸಕರು ಯಾವ ಕಾರಣಕ್ಕೆ ಬೆಂಬಲ ಹಿಂಪಡೆದಿದ್ದಾರೆ ಎಂಬುದು ಗೊತ್ತಿಲ್ಲ, ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ, ಇದರಿಂದ ಮೈತ್ರಿ ಸರ್ಕಾರ ಅಸ್ಥಿರವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ಮಂಗಳವಾರ ಹೇಳಿದ್ದಾರೆ.
ಅವರು ಬೆಂಬಲ ಹಿಂಪಡೆದಿರುವುದರಿಂದ ಸರ್ಕಾರ ಅಸ್ಥಿರವಾಗುವುದಿಲ್ಲ, ಅಗತ್ಯ ಸಂಖ್ಯಾ ಬಲ ನಮ್ಮ ಬಳಿ ಇದೆ ಎಂದು ಹೇಳಿದರು.
ಬಿಜೆಪಿ ನಾಯಕರು ನಮ್ಮ ಶಾಸಕರಿಗೆ ಅಧಿಕಾರದ ಆಸೆ, ಆಮೀಷ ತೋರಿಸಿದ್ದಾರೆ. ಕೆಲವು ಶಾಸಕರನ್ನು ಮುಂಬೈನಲ್ಲಿ ಹಿಡಿದಿಟ್ಟುಕೊಂಡಿದ್ದಾರೆ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸು ಪಡೆದ ಪಕ್ಷೇತರ ಶಾಸಕರು
ಬಿಜೆಪಿಯವರು ಎಷ್ಟು ಜನ ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ ಎಂಬುದು ತಿಳಿದಿಲ್ಲ, ಅವರು ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದು ಇಡೀ ದೇಶಕ್ಕೆ ಗೊತ್ತಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು.
ಬಿಜೆಪಿಯವರು ಸಮ್ಮಿಶ್ರ ಸರ್ಕಾರವನ್ನು ಕೆಡವಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಬೆಲೆ ಇದೆ ಹಾಗಾಗಿ ನಮ್ಮ ಸರ್ಕಾರವಂತೂ ಅಸ್ಥಿರವಾಗುವುದಿಲ್ಲ ಎಂದು ಅವರು ನುಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.