ಎತ್ತುಗಳಿಗೆ ಮಧ್ಯಾಹ್ನ 12ರಿಂದ 3ರ ವರೆಗೆ ವಿಶ್ರಾಂತಿ

ಶನಿವಾರ, ಜೂಲೈ 20, 2019
26 °C

ಎತ್ತುಗಳಿಗೆ ಮಧ್ಯಾಹ್ನ 12ರಿಂದ 3ರ ವರೆಗೆ ವಿಶ್ರಾಂತಿ

Published:
Updated:
Prajavani

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಜಾನುವಾರುಗಳ ಮೇಲೆ ಪ್ರೀತಿ ಹೆಚ್ಚಾಗಿದ್ದು, ಬೇಸಿಗೆ ಸಮಯದಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆ ನಡುವೆ ಹೊಲದಲ್ಲಿ ದುಡಿಸಿಕೊಳ್ಳುವಂತಿಲ್ಲ ಎಂದು ಆದೇಶಿಸಿದೆ.

ಜನರಿಗಷ್ಟೇ ಬೇಸಿಗೆ ಬಿಸಿಲು ತಟ್ಟುವುದಿಲ್ಲ. ಎತ್ತುಗಳೂ ಇದರ ಪರಿಣಾಮ ಎದುರಿಸುತ್ತವೆ. ಆ ಸಮಯದಲ್ಲಿ ದುಡಿಯುವುದು ಕಷ್ಟಕರ. ಹಾಗಾಗಿ ಮಧ್ಯಾಹ್ನದ ಸಮಯದಲ್ಲಿ ರೈತರು, ಉಳುಮೆಗೆ ಎತ್ತುಗಳನ್ನು ಬಳಸಿಕೊಳ್ಳುವಂತಿಲ್ಲ. ಒಂದು ವೇಳೆ ನಿಯಮ ಮೀರಿದರೆ ಕ್ರಮ ಕೊಳ್ಳಲಾಗುವುದು ಎಂದು ಒಳಾಡಳಿತ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಎಚ್ಚರಿಸಿದೆ.

ಆಯಾ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಮೂಲಕ ಈ ನಿಮಯ ಜಾರಿ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 2

  Happy
 • 4

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !