ಸೋಮವಾರ, ಆಗಸ್ಟ್ 2, 2021
21 °C

ಸಾರಿಗೆ ನೌಕರರ ವೇತನಕ್ಕೆ ಅನುದಾನ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರ ಮೇ ತಿಂಗಳ ವೇತನಕ್ಕಾಗಿ ₹325.01 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

‘ಲೌಕ್‌ಡೌನ್‌ನಿಂದ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿರುವ ಕಾರಣ ವೇತನಕ್ಕಾಗಿ ಮುಖ್ಯಮಂತ್ರಿ ಅವರು ವಿಶೇಷ ಅನುದಾನ ನೀಡಿದ್ದಾರೆ’ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

‘ಅನುದಾನ ಬಿಡುಗಡೆಗೆ ಆದೇಶವಾಗಿದೆ. ಕಡತ ಖಜಾನೆಗೆ ಹೋಗಿ ಬರಲು ಒಂದೆರಡು ದಿನ ಕಾಲವಕಾಶ ಬೇಕಾಗಲಿದೆ. ಕಳೆದ ತಿಂಗಳಿನಂತೆ ಬಹುತೇಕ ಜೂನ್ 15ರಂದು ನಾಲ್ಕೂ ಸಂಸ್ಥೆಗಳ ನೌಕರರ ಖಾತೆಗೆ ವೇತನ ಜಮೆ ಆಗಲಿದೆ’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು