ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಆದೇಶ

Last Updated 16 ಮೇ 2020, 13:35 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕರ್ನಾಟಕದಲ್ಲಿ ವಲಸೆ ಕಾರ್ಮಿಕರಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಕೆಎಸ್ ಆರ್‌ಟಿಸಿ ಸೇರಿದಂತೆ ಎಲ್ಲಾ ಅಧೀನ ಸಾರಿಗೆ ಸಂಸ್ಥೆಗಳಿಗೆಆದೇಶಿಸಿದೆ.

ಕೇಂದ್ರ ಗೃಹ ಸಚಿವಾಲಯಆದೇಶದ ಮೇರೆಗೆ ಲಾಕ್‌ಡೌನ್‌ನಿಂದಾಗಿಹಲವೆಡೆ ಅತಂತ್ರ ಸ್ಥಿತಿಯಲ್ಲಿ ಸಿಲುಕರುವವಲಸೆ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರ ವ್ಯಕ್ತಿಗಳು ಕಾಲ್ನಡಿಗೆಯಲ್ಲಿ ಸಂಚರಿಸುವುದು ಕಂಡಲ್ಲಿ ಅವರನ್ನು ಅವರ ಸ್ವಂತ ಸ್ಥಳಗಳಿಗೆತಲುಪಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದರೆ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಸೇರಿದಂತೆ ಸರ್ಕಾರದ ಅಧೀನದಲ್ಲಿರುವ ಎಲ್ಲಾಸಾರಿಗೆ ಸಂಸ್ಥೆಗಳಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಆದೇಶಿಸಿದ್ದಾರೆ.

ಲಾಕ್ ಡೌನ್‌ನಿಂದಾಗಿ ಸಿಲುಕಿರುವ ವ್ಯಕ್ತಿಗಳು ಬೇರೆ ರಾಜ್ಯಗಳಿಂದ ಕರ್ನಾಟಕರಾಜ್ಯಕ್ಕೆ ತಲುಪುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಯಸಿದೆ. ಅದಕ್ಕೆ ಬೇಕಾಗಿರುವ ಸಾರಿಗೆ ವ್ಯವಸ್ಥೆಯನ್ನು ಈಗಾಗಲೇ ಕಲ್ಪಿಸಲಾಗಿದೆ.ಈ ಹಿನ್ನೆಲೆಯಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ತಮಗೆ ಈಗಾಗಲೇಸೂಚಿಸಲಾಗಿದೆ. ಅದರಂತೆ ಇಂತಹ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳು ಬಸ್ ಸೌಲಭ್ಯ ಕುರಿತು ಕೋರಿಕೆಸಲ್ಲಿಸಿದಲ್ಲಿ ಅಂತಹ ಕೋರಿಕೆಗಳನ್ನು ಪರಿಗಣಿಸಿ ಕೂಡಲೆ ಬಸ್ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮಕೈಗೊಳ್ಳುವಂತೆಸೂಚಿಸಿದೆ. ಸದರಿ ವ್ಯವಸ್ಥೆಗೆ ತಗಲುವ ವೆಚ್ಚದ ವಿವರಗಳನ್ನು ಪ್ರತಿನಿತ್ಯ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಗೆ ಸಲ್ಲಿಸುವಂತೆಕೋರಿರುವುದಾಗಿ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT